Advertisement

JP Nadda ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ

04:35 PM Oct 12, 2023 | Team Udayavani |

ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ವಿರುದ್ಧದ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

Advertisement

ವಿಧಾನಸಭೆ ಚುನಾವಣೆ ವೇಳೆ ನಡ್ಡಾ ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ದೂರು ದಾಖಲಾಗಿತ್ತು. ಹಾವೇರಿ‌ ಜಿಲ್ಲೆಯ ಶಿಗ್ಗಾವಿಯಲ್ಲಿ‌ ಭಾಷಣ ಮಾಡುವಾಗ ಮತದಾರರ ಮೇಲೆ ಪ್ರಧಾನಿ ಮೋದಿ ಆಶೀರ್ವಾದ ಇರುತ್ತದೆ ಎಂದು ನಡ್ಡಾ ಹೇಳಿದ್ದರು. ಈ‌ ವೇಳೆ ನಡ್ಡಾ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿ ಲಕ್ಷ್ಮಣ ನಂದಿ ಎನ್ನುವವರು ದೂರು ದಾಖಲಿಸಿದ್ದರು.

2023ರ ಮೇ 1ರಂದು ಅಂದಿನ ಮುಖ್ಯಮಂತ್ರಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಭಾಷಣ ಮಾಡುವಾಗ ನಡ್ಡಾ ಈ ಹೇಳಿಕೆ ನೀಡಿದ್ದರು.

ಇದನ್ನೂ ಓದಿ:Gudibande: ಪಪಂನಲ್ಲಿ ಯಾವ ಕೆಲಸವೂ ಆಗಲ್ಲ ,ಎಲ್ಲವೂ ಅವ್ಯಸ್ಥೆ

ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ತಡೆ ಕೋರಿ ನಡ್ಡಾ ಪರ ವಕೀಲರು ಧಾರವಾಡ ಹೈಕೋರ್ಟ್ ಮೇಟ್ಟಿಲೇರಿದ್ದರು. ಇವತ್ತು ವಿಚಾರಣೆ ನಡೆಸಿ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮದ್ಯಂತರ ತಡೆ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next