Advertisement

J.P.Nadda ವಿರುದ್ದದ ಎಫ್ಐಆರ್ ರದ್ದು ಮಾಡಿದ ಧಾರವಾಡ ಹೈಕೋಟ್೯

08:15 PM Aug 07, 2023 | Team Udayavani |

ಧಾರವಾಡ : ವಿಧಾನಸಭಾ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಭಾರತಿಯ ಜನತಾ ಪಕ್ಷದ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಧಾರವಾಡ ಹೈಕೋರ್ಟ್ ಪೀಠವು ಸೋಮವಾರ ರದ್ದುಪಡಿಸಿದೆ.

Advertisement

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ 2023 ಮೇ 7 ರಂದು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರಾರ್ಥವಾಗಿ ಜರುಗಿದ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮತದಾರರಿಗೆ ಆಮಿಷ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಚುನಾವಣಾಧಿಕಾರಿಗಳಿಂದ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮ್ಮ ವಿರುದ್ಧ ಆಧಾರ ರಹಿತವಾಗಿ ದಾಖಲಾದ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಹೈಕೋರ್ಟ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಕೈಗೊಂಡ ನ್ಯಾ. ಎಂ. ನಾಗಪ್ರಸನ್ ಅವರಿದ್ದ ಏಕಸದಸ್ಯ ಪೀಠವು, ಅರ್ಜಿದಾರರು ರಾಜ್ಯಸಭಾ ಸದಸ್ಯರಾಗಿದ್ದು ದೂರು ದಾಖಲಿಸಲು ಮ್ಯಾಜಿಸ್ಟೇಟ್ ನ್ಯಾಯಾಲಯದಿಂದ ಅನುಮತಿ ಪಡೆಯಬೇಕು. ಹೀಗೆ ಅನುಮತಿ ಪಡೆಯುವಲ್ಲಿಯೂ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಿದೆ.

ಇದಲ್ಲದೇ ದಾಖಲಾದ ದೂರಿನಲ್ಲಿಯೂ ಅರ್ಜಿದಾರರು ಮತದಾರರಿಗೆ ಆಮಿಷ ಹಾಗೂ ಬೆದರಿಕೆ ನೀಡುವಂತಹ ಹೇಳಿಕೆ ಕಂಡುಬಂದಿಲ್ಲ. ಹೀಗಾಗಿ ದಾಖಲಾದ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂಬುದಾಗಿ ಹೇಳಿದ ನ್ಯಾಯಪೀಠವು, ಜೆ.ಪಿ. ನಡ್ಡಾ ವಿರುದ್ಧದ ಎಫ್‌ಐಆರ್ ಅನ್ನು ರದ್ದುಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next