Advertisement
ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ. ಮೊದಲು ಅವನು ಬಹಳ ಓದಿನಲ್ಲಿ ಜಾಣನಿದ್ದ. ಅವಳೇ ಇವನಿಗೆ ಪ್ರಪೋಸ್ ಮಾಡಿದ್ದಳು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ ಹೇಳಿದ್ದೆ ಎಂದಿದ್ದಾರೆ.
Related Articles
Advertisement
ನೇಹಾ ಹಿರೇಮಠಳನ್ನು ಕೊಂದ ನನ್ನ ಮಗನಿಗೆ ಅತ್ಯಂತ ಕಠಿನ ಶಿಕ್ಷೆ ಆಗಲಿ. ಆ ಶಿಕ್ಷೆಯನ್ನು ನೋಡಿ ಮುಂದೆ ಯಾರೂ ಇಂಥ ಕ್ರೂರ ಕೆಲಸಕ್ಕೆ ಕೈ ಹಾಕಬಾರದು ಎಂದು ಕೊಲೆ ಪ್ರಕರಣದ ಆರೋಪಿ ಫಯಾಜ್‌ನ ತಂದೆ, ಶಿಕ್ಷಕ ಬಾವಾಸಾಹೇಬ (ಭವಾನಿ) ಖೊಂಡುನಾಯ್ಕ ಹೇಳಿದರು.
ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾನೂನು ಯಾವ ಶಿಕ್ಷೆ ಕೊಟ್ಟರೂ ಸ್ವಾಗತಿಸುತ್ತೇನೆ. ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ದಯವಿಟ್ಟು ನನ್ನನ್ನು ಕ್ಷಮಿಸಬೇಕು ಎಂದು ಮನವಿ ಮಾಡಿದರು.
ನಾವೆಲ್ಲರೂ ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು. ಯಾರಿಗಾದರೂ ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಿರುವವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ ಎಂದರು.
ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡಬೇಕು. ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ನೇಹಾ ನನ್ನ ಮಗಳಿದ್ದ ಹಾಗೆ, ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದರು.
ನೇಹಾ ಹಾಗೂ ಫಯಾಜ್ ರೀಲ್ಸ್ ವೈರಲ್ ಆಗಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಅವರಿಬ್ಬರ ಮಧ್ಯೆ ಪ್ರೀತಿ ಇತ್ತು. ಈ ನಿಮ್ಮ ಪ್ರೀತಿಗೆ “ಲವ್ ಜಿಹಾದ್’ ಬಣ್ಣ ಕಟ್ಟಿ ಟಾರ್ಗೆಟ್ ಮಾಡುತ್ತಾರೆ ಎಂದು ಮಗನಿಗೆ ಬುದ್ಧಿ ಹೇಳಿದ್ದೆ ಎಂದು ಹೇಳಿದರು.