Advertisement
ಹೃದಯಾಘಾತವಾದ ತಕ್ಷಣ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28 ಸಾವಿರ ರೂಪಾಯಿ ಮೌಲ್ಯದ ಯೋಜನೆ ಇದಾಗಿದೆ. ಹೃದಯಾಘಾತವಾದ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್ ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ ಮಾಡಲಾಗಿದೆ. ಈಗಾಗಲೇ ರಾಜ್ಯದ 15 ಜಿಲ್ಲೆ ಹಾಗೂ 71 ತಾಲೂಕಾ ಆಸ್ಪತ್ರೆಯಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. ಎರಡನೇ ಹಂತದಲ್ಲಿ ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ ಸೇರಿದಂತೆ 36 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಬರುವ ದಿನಗಳಲ್ಲಿ ರಾಜ್ಯಾದ್ಯಂತ ಈ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Advertisement
Dharwad; ಪುನೀತ್ ಹೃದಯ ಜ್ಯೋತಿ 2ನೇ ಹಂತದ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ
02:29 PM Mar 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.