Advertisement

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

04:10 PM Jan 09, 2025 | Team Udayavani |

ಧಾರವಾಡ: ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದಾರೆನ್ನಲಾದ ಹೇಳಿಕೆ ವಿರೋಧಿಸಿ ಗುರುವಾರ (ಜ.09) ಹುಬ್ಬಳ್ಳಿ, ಧಾರವಾಡ ಅವಳಿನಗರ ಬಂದ್‌ಗೆ ದಲಿತಪರ ಸಂಘಟನೆಗಳು  ನಡೆಸುತ್ತಿರುವ ಬಂದ್ ವೇಳೆ ಕೆಲವರು ಜನಸಾಮಾನ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.

Advertisement

ಬೆಳಿಗ್ಗೆ 6 ಗಂಟೆಯಿಂದಲೇ ದಲಿತಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಬಂದ್ ಮತ್ತು ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ ಕೆಲವು ಕಡೆಗಳಲ್ಲಿ ಹೋಟೆಲ್‌ಗಳಿಗೆ ನುಗ್ಗಿದ ಪ್ರತಿಭಟನಾಕಾರರು ಅವುಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿದ ದೃಶ್ಯಗಳು ಕಂಡುಬಂದವು.

ಶ್ರೀನಗರ ವೃತ್ತದಲ್ಲಿ ರಸ್ತೆ ಮೇಲೆ ಇಡ್ಲಿ, ಸಾಂಬಾರ ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳದಿಂದ ಹೋಗುವಂತೆ ಪ್ರತಿಭಟನಾಕಾರರು ಎಚ್ಚರಿಕೆ ನೀಡುವುದನ್ನು ಬಿಟ್ಟು ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಯಾವುದೇ ಒತ್ತಾಯ ಪೂರ್ವಕ ಬಂದ್ ಮಾಡಬಾರದು ಎಂದು ಆದೇಶವಿದ್ದರೂ ಈ ರೀತಿ ನಡೆದುಕೊಂಡಿರುವುದು ಸಾರ್ವಜನಿಕರ ಕಣ್ಣು ಕೆಂಪಾಗಿಸಿದೆ.

ಅದೇ ರೀತಿ ಸರ್.ಸಿದ್ದಪ್ಪ ಕಂಬಳಿ ಕಾನೂನು ಕಾಲೇಜು ಕಾರ್ಯಾರಂಭ ಮಾಡಿದ್ದನ್ನು ಗಮನಿಸಿದ ಪ್ರತಿಭಟನಾಕಾರರು ಆ ಕಾಲೇಜಿಗೆ ನುಗ್ಗಿ ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ. ಅಲ್ಲದೇ ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿ ಉಪನ್ಯಾಸಕರನ್ನೂ ತಳ್ಳಾಡಿ ಕಾಲೇಜು ಬಂದ್ ಮಾಡಿಸಿದ ಪ್ರಸಂಗ ಕೂಡ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next