Advertisement
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಕೌಟುಂಬಿಕ ದೌರ್ಜನ್ಯ ತಡೆಗೆ ಆರಂಭಿಸಿರುವ ಸಾಂತ್ವನ ಸಹಾಯವಾಣಿಯ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಿರ್ವಹಣೆಗೊಳ್ಳುತ್ತಿರುವ ಮಹಿಳಾ ಸಹಾಯವಾಣಿ ಸಂಖ್ಯೆ 181, ದೂರವಾಣಿ ಸಂಖ್ಯೆ: 0836-2445484, 0836-2747353 ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಅಸಂಘಟಿತ ವಲಯದ ಕಾರ್ಮಿಕ ಸಂಘದ ಅಧ್ಯಕ್ಷ ದುರುಗಪ್ಪ ಚಿಕ್ಕತುಂಬಳ, ಸುರೇಶ ನಾಡಿಗೇರ ಮತ್ತಿತರರಿಗೆ ಸಚಿವರು ನಗರದ ಡಿಸಿ ಕಚೇರಿ
ಆವರಣದಲ್ಲಿ ಸಾಂಕೇತಿಕವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಸಿ.ಎಂ.ನಿಂಬಣ್ಣವರ, ಶಂಕರ ಪಾಟೀಲ ಮುನೇನಕೊಪ್ಪ,ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ, ಡಿಸಿ ದೀಪಾ ಚೋಳನ್, ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ ಸೇರಿದಂತೆ ಹಲವರು ಇದ್ದರು.