Advertisement

ಧಾರವಾಡ: ಮೂರು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

09:54 PM Jun 07, 2020 | Sriram |

ಧಾರವಾಡ: ಜಿಲ್ಲೆಯಲ್ಲಿ ಇಂದು ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

Advertisement

DWD 58  ಪಿ  5380 (21 ವರ್ಷ , ಮಹಿಳೆ) , DWD 60 ಪಿ 5382 ( 11 ವರ್ಷ ,ಬಾಲಕಿ)ಇವರಿಬ್ಬರೂ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. DWD 59 ಪಿ 5381 ( 24 ವರ್ಷ,ಮಹಿಳೆ) ಇವರಿಗೆ ಪಿ 3397 ಅವರೊಂದಿಗೆ ಸಂಪರ್ಕ ಹೊಂದಿದ್ದರು.

ಸೋಂಕು ದೃಢಪಟ್ಟಿರುವವರಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ್ದ ಇಬ್ಬರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು. ಪಿ  3397 ರ ಸಂಪರ್ಕಿತರು ಹೋಂ ಕ್ವಾರಂಟೈನ್ ನಲ್ಲಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ. ಈಗಾಗಲೇ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next