Advertisement

Dharwad; ಅರವಿಂದ ಜತ್ತಿ ಸೇರಿದಂತೆ ಮೂವರಿಗೆ ಕವಿವಿ ಗೌರವ ಡಾಕ್ಟರೇಟ್

04:37 PM Oct 27, 2023 | Team Udayavani |

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವವು ಅಕ್ಟೋಬರ್ 30 ರಂದು ಜರುಗಲಿದ್ದು, ಈ ಸಲದ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಹೇಳಿದರು.

Advertisement

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಬಸವೇಶ್ವರ ತತ್ವಗಳ ಪ್ರಚಾರ, ವಚನ ಸಾಹಿತ್ಯದಲ್ಲಿ ಅನುವಾದ ಸೇರಿದಂತೆ ಶರಣ ತತ್ವ ಪ್ರಚಾರಕ್ಕಾಗಿ ನೀಡಿರುವ ಕೊಡುಗೆಗಾಗಿ ಬಸವ ಸಮಿತಿಯ ರಾಜ್ಯ ಅಧ್ಯಕ್ಷರಾದ ಅರವಿಂದ ಜತ್ತಿ, ಆರೋಗ್ಯ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ಧಾರವಾಡ ಮೂಲದ ಅಮೇರಿಕದಲ್ಲಿ ನೆಲೆಸಿರುವ ಶಿಕ್ಷಣ ಪ್ರೇಮಿ ರವಿಶಂಕರ ಭೂಪಲಾಪೂರ ಹಾಗೂ ಸಮಾಜ ಸೇವೆ, ಗ್ರಾಮಗಳ ಅಭಿವೃದ್ದಿಗಾಗಿ ಗ್ರಾಮಗಳ ದತ್ತು ಸ್ವೀಕರಿಸಿದ ಉದ್ಯಮಿ ಅರ್ಚನಾ ಸುರಾಣಾ ಅವರಿಗೆ ಗೌಡಾ ನೀಡಲು ನಿರ್ಧರಿಸಲಾಗಿದೆ ಎಂದರು.

ಅ.30 ರಂದು 10:30 ಗಂಟೆಗೆ ನಡೆಯಲಿರುವ ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವದಲ್ಲಿ ಈ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವದು. ಈ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಾಧಿಪತಿಯಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಾಲ್ಗೊಳ್ಳಲಿದ್ದಾರೆ. ನವದೆಹಲಿಯ ಇಂಡೋ ಫ್ರೆಂಚ್ ಸೆಂಟರ್ ಫಾರ್ ಪ್ರಮೋಷನ್ ಆಫ್ ಅಡ್ವಾನ್ಸ್ ರಿಸರ್ಚ ನಿರ್ದೇಶಕ ಪ್ರೊ.ನಿತಿನ್ ಶೇಠ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next