ಧಾರವಾಡ : ಗೋವಾಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ವನ್ಯ ಜೀವಿ ಮಂಡಳಿ ಒಪ್ಪಿಗೆ ಕೊಡುತ್ತದೆ. ಮಹಾದಾಯಿ ಯೋಜನೆಗಾದರೆ ಒಪ್ಪಿಗೆ ಕೊಡುವುದಿಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕಳಸಾ ಬಂಡೂರಿ ವಿಷಯದಲ್ಲಿ ಹೀಗೆಯೇ ಆಗುತ್ತಿದೆ. ಕೇಂದ್ರದಲ್ಲಿ ಬಿಜೆಪಿಯೇ ಇದೆ. ಈ ಹಿಂದೆ ರಾಜ್ಯದಲ್ಲೂ ಬಿಜೆಪಿಯೇ ಇತ್ತು. ಆದರೂ ಮಹದಾಯಿ ಯೋಜನೆ ಜಾರಿಯಾಗಲಿಲ್ಲ ಎಂದರು.
ಕರ್ನಾಟಕದ ವಿಷಯದಲ್ಲಿ ಮಲತಾಯಿ ಧೋರಣೆ ಮಾಡುತ್ತಿರುವುದು ಏಕೆ? ಕಳೆದ ಹತ್ತು ವರ್ಷಗಳಿಂದ ಇದೇ ಪ್ರಶ್ನೆಯನ್ನು ನಾವು ಕೇಳುತ್ತಿದ್ದೇವೆ. ಇದನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ಕೇಳಬೇಕು ಎಂದರು.
ಸಿಎಂ ಪ್ರಾಸಿಕ್ಯೂಷನ್ ವಿಚಾರ ನ್ಯಾಯಾಲಯದಲ್ಲಿದೆ. ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸ ಇದೆ. ಯರ‍್ಯಾರು ಸಿಎಂ ಆಗಬೇಕು ಎನ್ನುತ್ತಾರೋ ಅವರನ್ನೇ ಕೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: Mangaluru: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳ ಸೆರೆ