Advertisement
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ.19ರಂದು ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಜ.20, 21ರಂದು ಗ್ರಾಮೀಣ ಪ್ರದೇಶದ ಹಾಗೂ ಜ.20,21, 22ರಂದು ನಗರ ಪ್ರದೇಶದ ಮನೆ-ಮನೆಗೆ ತೆರಳಿ ಮಕ್ಕಳಿಗೆ ಆರೋಗ್ಯ ಕಾರ್ಯಕರ್ತೆಯರು ಪೋಲಿಯೋ ಲಸಿಕೆ ಹಾಕಲಿದ್ದಾರೆ. ಪ್ರಸ್ತುತ ಅಭಿಯಾನದಲ್ಲಿ 5 ವರ್ಷದೊಳಗಿರುವ 2,11,491 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 897 ಲಸಿಕಾ ಕೇಂದ್ರ, 55 ಸಂಚಾರಿ ತಂಡಗಳು, 95 ಸಾಗಾಣಿಕೆ ತಂಡಗಳನ್ನು ರಚಿಸಲಾಗಿದೆ. 196 ಮೇಲ್ವಿಚಾರಕರು ಸೇರಿದಂತೆ 3,816 ಲಸಿಕಾ ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ನಗರ ಮತ್ತು ಗ್ರಾಮೀಣ ಸೇರಿದಂತೆ ಒಟ್ಟು 4,19,713 ಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.
ಜಿಪಂ ಸಿಇಒ ಡಾ| ಬಿ.ಸಿ ಸತೀಶ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಯಶವಂತ ಮದೀನಕರ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ| ಎಸ್.ಎಂ.ಹೊನಕೇರಿ, ಡಾ| ಸಿದ್ದಲಿಂಗಯ್ಯ ಸೇರಿದಂತೆ
ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.