Advertisement
ಸುದ್ದಿಗಾರರ ಜತೆ ಮಾತನಾಡಿ, ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿರುವ ಕಡಬದ ಸರಕಾರಿ ಆಸ್ಪತ್ರೆಗೆ 4.85 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧಗೊಂಡಿದೆ. 6 ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರವು 9 ವರ್ಷಗಳ ಹಿಂದೆ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿದೆ. ಅದರಂತೆ ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರು ಸಹಿತ ನಾಲ್ವರು ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು ಹೀಗೆ ಒಟ್ಟು 34 ಹುದ್ದೆಗಳು ಮಂಜೂರಾತಿಗೊಂಡಿವೆ ಎಂದರು.
ನೂತನ ಕಟ್ಟಡದ ಉದ್ಘಾಟನೆಗೆ ದಿನ ನಿಗದಿ ಮಾಡಲಾಗುವುದು. ಹಾಗೆಯೇ ಜಿಲ್ಲೆಯ ಹೊಸ ತಾಲೂಕುಗಳಾದ ಕಡಬ, ಮೂಡಬಿದರೆಯ ಸರಕಾರಿ ಆಸ್ಪತ್ರೆ ಗಳನ್ನು 100 ಹಾಸಿಗೆಗಳ ತಾ| ಮಟ್ಟದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಂತ ಹಂತವಾಗಿ ಕಡಬಕ್ಕೂ ತಾಲೂಕು ಆಸ್ಪತ್ರೆಯ ಮಾನ್ಯತೆ, ಸವಲತ್ತುಗಳು ಸಿಗಲಿವೆ ಎಂದು ಡಿಎಚ್‌ಒ ತಿಳಿಸಿದರು.