Advertisement

ಕೋವಿಶಿಲ್ಡ್‌ ಲಸಿಕೆ ಪಡೆದ ಡಿಎಚ್‌ಒ

05:33 PM Feb 18, 2021 | Team Udayavani |

ಬೀದರ: ಬೀದರ ಮತ್ತು ಬಸವಕಲ್ಯಾಣ ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ್‌ ಮತ್ತು ಭುವನೇಶ ಪಟೇಲ್‌ ಅವರು ನಗರದ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೋವಿಶೀಲ್ಡ್‌ ಲಸಿಕೆ ಪಡೆದುಕೊಂಡರು. ಕೋವಿಶೀಲ್ಡ್‌ ಲಸಿಕೆಯು ಸುರಕ್ಷಿತವಾಗಿದೆ. ಇದು ಆಸ್ಪತ್ರೆಯಲ್ಲಿ ಉಚಿತವಾಗಿದೆ. ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಈಗಾಗಲೇ ಗುರುತಿಸಿದ ಇಲಾಖೆಗಳ ನೌಕರರು ತಪ್ಪದೇ ಕೋವಿಡ್‌ ಲಸಿಕೆ ಪಡೆದುಕೊಳ್ಳಬೇಕು ಎಂದು ಗರಿಮಾ ಪನ್ವಾರ್‌ ಹೇಳಿದರು.

Advertisement

ನಾನು ಕೋವಿಶೀಲ್ಡ್‌ ಲಸಿಕೆ ಪಡೆದುಕೊಂಡಿದ್ದೇನೆ. ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಕಂಡುಬಂದಿಲ್ಲ. ಕೋವಿಶೀಲ್ಡ್‌ ಲಸಿಕೆಯ ಮಹತ್ವ
ಅರಿತು ಮುಂಚೂಣಿಯಲ್ಲಿರುವ ಎಲ್ಲ ಇಲಾಖೆಗಳ ಅ ಧಿಕಾರಿಗಳು ಮತ್ತು ಸಿಬ್ಬಂದಿ ಲಸಿಕೆ ಪಡೆದುಕೊಳ್ಳಬೇಕು ಎಂದು ಭುವನೇಶ ಪಟೇಲ್‌ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಎರಡನೇ ಡೋಸ್‌ ಪಡೆದ ಡಿಎಚ್‌ಒ:
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ಅವರು ಕೋವಿಡ್‌ ಲಸಿಕೆಯ ಎರಡನೇ ಡೋಸ್‌ ಪಡೆದರು. ಕೋವಿಶಿಲ್ಡ್‌ ಲಸಿಕೆಯ ಬಗ್ಗೆ ಇದುವರೆಗೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಕಂಡು ಬಂದಿಲ್ಲ. ಪೊಲೀಸ್‌, ನಗರಸಭೆ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್ಯ ಮತ್ತು ಇನ್ನಿತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿ ಮೊಹ್ಮದ್‌ ಸೋಹಲ್‌, ಡಾ.ಸರೋಜ ಪಾಟೀಲ ಮತ್ತು ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next