Advertisement
ಮುಂಬರುವ ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಾಗಿ ಸೋಮವಾರ ಪ್ರಕಟಗೊಂಡ ಭಾರತ ತಂಡಗಳ ಮಹತ್ವದ ಅಂಶಗಳಿವು.ಧೋನಿ ಅವರ ಟಿ20 ಪುನರಾಗಮನ ಅಚ್ಚರಿಯಾಗಿ ಕಂಡಿದೆ. ಕಳೆದ ತಿಂಗಳಷ್ಟೇ ಆಸ್ಟ್ರೇಲಿಯ ವಿರುದ್ಧದ ಏಕೈಕ ಟಿ20 ಪಂದ್ಯದಿಂದ ಧೋನಿ ಅವರನ್ನು ಕೈಬಿಡಲಾಗಿತ್ತು. ಮುಂದಿನ ವರ್ಷದ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಧೋನಿ ಅವರನ್ನು ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮನೀಷ್ ಪಾಂಡೆ ಅವರನ್ನು ಎರಡೂ ತಂಡಗಳಿಂದ ಕೈಬಿಡಲಾಗಿದೆ. ಇತ್ತೀಚೆಗೆ “ಎ’ ತಂಡದ ಪರ ಆಡಿದ ಪಾಂಡೆ ನ್ಯೂಜಿಲ್ಯಾಂಡ್ “ಎ’ ವಿರುದ್ಧ 79ರ ಸರಾಸರಿಯಲ್ಲಿ 158 ರನ್ ಬಾರಿಸಿ ಫಾರ್ಮ್ ಪ್ರದರ್ಶಿಸಿದ್ದರು. ತವರಿನಲ್ಲಿ ನಡೆದ “ಎ’ ತಂಡಗಳ ಚತುಷೊRàಣ ಸರಣಿಯಲ್ಲೂ ಮಿಂಚಿದ್ದರು.
Related Articles
ಇತ್ತೀಚೆಗೆ ಆಸ್ಟ್ರೇಲಿಯ ಪ್ರವಾಸದಲ್ಲಿರುವ ಟೆಸ್ಟ್ ತಂಡಕ್ಕೆ ಕರೆ ಪಡೆದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎರಡೂ ತಂಡಗಳಿಗೆ ಮರಳಿದ್ದಾರೆ. ಬೆನ್ನುನೋವಿನಿಂದಾಗಿ ಅವರು ವೆಸ್ಟ್ ಇಂಡೀಸ್ ಎದುರಿನ ತವರಿನ ಸರಣಿಯನ್ನು ತಪ್ಪಿಸಿಕೊಂಡಿದ್ದರು.
Advertisement
ಪೇಸ್ ಬೌಲರ್ ಮೊಹಮ್ಮದ್ ಶಮಿ ಅವರನ್ನು ಏಕದಿನ ತಂಡಕ್ಕೆ ಮರಳಿ ಸೇರ್ಪಡೆಗೊಳಿಸಲಾಗಿದೆ. ಕಳಪೆ ಫಾರ್ಮ್ನಿಂದಾಗಿ ತವರಿನ ವಿಂಡೀಸ್ ಎದುರಿನ ಸರಣಿಯ ಕೊನೆಯ 3 ಪಂದ್ಯಗಳಿಂದ ಅವರನ್ನು ಕೈಬಿಡಲಾಗಿತ್ತು. ಉಮೇಶ್ ಯಾದವ್ ಅವರನ್ನು ಎರಡೂ ತಂಡಗಳಿಂದ ಹೊರಗಿಡಲಾಗಿದೆ. ಕಳೆದ ಟಿ20 ತಂಡದಲ್ಲಿದ್ದ ಶ್ರೇಯಸ್ ಅಯ್ಯರ್ ಅವರೂ ಆಯ್ಕೆಗಾರರ ಅವಕೃಪೆಗೊಳಗಾಗಿದ್ದಾರೆ. ಹಾಗೆಯೇ ಅಜಿಂಕ್ಯ ರಹಾನೆ, ಆರ್. ಅಶ್ವಿನ್ ಅವರಿಗೆ ವಿಶ್ವಕಪ್ ಬಾಗಿಲು ಮುಚ್ಚಿದೆ ಎಂಬುದೂ ಈ ಆಯ್ಕೆಯಿಂದ ಸಾಬೀತಾಗಿದೆ.
ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿ ಜ. 12ರಿಂದ ಸಿಡ್ನಿಯಲ್ಲಿ ಆರಂಭವಾಗಲಿದೆ. ಇದು ಮುಗಿದ ಬಳಿಕ ಭಾರತ ತಂಡ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದೆ. ಇದರ ವೇಳಾಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ.
ಭಾರತ ಕ್ರಿಕೆಟ್ ತಂಡಗಳುಆಸ್ಟ್ರೇಲಿಯ, ನ್ಯೂಜಿಲ್ಯಾಂಡ್ ಸರಣಿಗೆ ಏಕದಿನ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಅಂಬಾಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಮಹೇಂದ್ರ ಸಿಂಗ್ ಧೋನಿ (ವಿ.ಕೀ.), ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ರವೀಂದ್ರ ಜಡೇಜ, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ನ್ಯೂಜಿಲ್ಯಾಂಡ್ ಸರಣಿಗೆ ಟಿ20 ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಮಹೇಂದ್ರ ಸಿಂಗ್ ಧೋನಿ (ವಿ.ಕೀ.), ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್.