Advertisement

ಚಾಮರಾಜನಗರ ಪ್ರಕರಣ : ಸಮಸ್ಯೆ ಗೊತ್ತಿದ್ದರೂ ಸುಮ್ಮನಿದ್ದಿದ್ದು ಅಪರಾಧ : ಧ್ರುವನಾರಾಯಣ್ ಕಿಡಿ

02:32 PM May 03, 2021 | Team Udayavani |

ಚಾಮರಾಜನಗರ : ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.  ಈ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದ್ದು, ಮುನ್ನೆಚ್ಚರಿಕೆ ಕ್ರಮವಹಿಸಿದ್ದರೆ  ಅನಾಹುತ ತಪ್ಪಿಸಬಹುದಿತ್ತು ಎಂದಿದ್ದಾರೆ.

Advertisement

ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ಈ ಘಟನೆಗೆ ನೇರ ಕಾರಣ. ಇದು ದೊಡ್ಡ ಕ್ರಿಮಿನಲ್ ಅಪರಾಧವಾಗಿದೆ. ಅಲ್ಲಿನ ಡಿಸಿ, ಸಚಿವರ ಜೊತೆ ನೆನ್ನೇಯೇ ದೂರವಾಣಿ ಮೂಲಕ ಸಂಪರ್ಕಿಸಿದ್ದೆ, ಆದರೆ ಸಂಪರ್ಕಕ್ಕೆ ಸಿಗಲಿಲ್ಲ. ಇಂದು ಬೆಳಗ್ಗೆ ಕರೆ ಮಾಡಿ ಸಮಸ್ಯೆ ಇಲ್ಲ ಎಂದರು. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ಸಮಸ್ಯೆ ಇದೆ ಎಂದು ಗೊತ್ತಿದ್ದರೂ ಸುಮ್ಮನಿದ್ದಿದ್ದು ಅಪರಾಧ ಎಂದು ಧ್ರುವ ನಾರಾಯಣ್ ಹೇಳಿದ್ದಾರೆ.

ಜನಪ್ರತಿನಿಧಿಗಳಾಗಿ ನಾವು ಜನರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಲೇಬೇಕು. ಈ ಘಟನೆ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಶಿಕ್ಷೆಗೊಳಪಡಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next