Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಆರ್ ಧ್ರುವನಾರಾಯಣ್ , ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ಈ ಹಿಂದೆ 1.65 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.ನಾನು ಸಹ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದಾಗಿ 1816 ಮತಗಳ ಅಂತರದಿಂದ ಸೋತಿದ್ದೇನೆ.ಯಾವುದೇ ಚುನಾವಣೆಯಲ್ಲಿ ಗೆಲುವಿನ ಅಂತರ ಮುಖ್ಯವಾಗುವುದಿಲ್ಲ ಎಂದರು.
Related Articles
ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ಕೈಕಟ್ಟಿ ಕುಳಿತಿರುವುದು ನಾಚಿಕೇಗೇಡು. ಬಿಜೆಪಿಯಲ್ಲಿರುವ ದಲಿತ ನಾಯಕರುಗಳು ಕೂಡ ಬಾಯಿ ಮುಚ್ಚಿಕೊಂಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಂದಿನಿಂದಲೂ ದೇಶಾದ್ಯಂತ ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದರು.
Advertisement
ಜೆಡಿಎಸ್ ನಲ್ಲಿ ಅಸಮಾಧಾನಗೊಂಡಿರುವ ಶಾಸಕರು ಕಾಂಗ್ರೆಸ್ ನ ಹಿರಿಯ ನಾಯಕರ ಸಂಪರ್ಕದಲ್ಲಿರುವುದು ನಿಜ.ಶಾಸಕ ಸಿ ಎಸ್ ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸೇರಿದಂತೆ ಜೆಡಿಎಸ್ ನ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ.ಜೆಡಿಎಸ್ ಪಕ್ಷದೊಳಗಿನ ಕುಟುಂಬ ರಾಜಕಾರಣದಿಂದ ಬೇಸತ್ತಿದ್ದಾರೆ.ಈ ರೀತಿ ಬೇಸತ್ತಿರುವ ಜೆಡಿಎಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಎಂದರು. ಸಚಿವ ವಿ ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಎಲ್ಲೂ ಪ್ರಸ್ತಾಪವಾಗಿಲ್ಲ. ಅವರು ಈಗ ಮಂತ್ರಿಯಾಗಿದ್ದಾರೆ. ಈಗಷ್ಟೇ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಯಾವುದೇ ಹಂತದಲ್ಲೂ ಪ್ರಸ್ತಾಪವಾಗಿಲ್ಲ ಎಂದರು.