Advertisement

ತೆರೆಯತ್ತ ‘ಧಮ್’..: ಇದು ಸುದೀಪ್ ಚಿತ್ರವಲ್ಲ

12:06 PM Aug 15, 2022 | Team Udayavani |

ಕೆಲ ವರ್ಷಗಳ ಹಿಂದೆ ಕಿಚ್ಚ ಸುದೀಪ್‌ ಅಭಿನಯದಲ್ಲಿ “ಧಮ್’ ಎನ್ನುವ ಸಿನಿಮಾ ಬಂದಿದ್ದು, ನಿಮಗೆ ನೆನಪಿರಬಹುದು. ಈಗ ಅದೇ ಹೆಸರಿನಲ್ಲಿ ಮತ್ತೂಂದು ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಅಂದಹಾಗೆ, ಸುದೀಪ್‌ ಅಭಿನಯದ “ಧಮ್‌’ ಸಿನಿಮಾಕ್ಕೂ ಈಗ ತೆರೆಗೆ ಬರುತ್ತಿರುವ, “ಧಮ್‌’ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ. ಸಿನಿಮಾದ ಸಬ್ಜೆಕ್ಟ್ಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರತಂಡ ತಮ್ಮ ಸಿನಿಮಾಕ್ಕೆ ಮತ್ತೂಮ್ಮೆ “ಧಮ್‌’ ಎಂಬ ಟೈಟಲ್‌ ಇಟ್ಟಿದೆ.

Advertisement

ಇನ್ನು ಯುವನಟ ಶ್ರೀಜಿತ್‌, ಎರೀನ್‌ ಅಧಿಕಾರಿ ನಾಯಕ-ನಾಯಕಿಯಾಗಿ ಅಭಿನಯಿಸಿರುವ ಈ ಸಿನಿಮಾದಲ್ಲಿ ಶಯ್ನಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್‌, ಗುರುಚಂದ್ರನ್‌ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾಕ್ಕೆ ವಿಆರ್‌ ಆರ್‌ ನಿರ್ದೇಶನವಿದೆ. ಸದ್ಯ ಬಿಡುಗಡೆಗೆ ಸಿದ್ಧವಾಗಿರುವ “ಧಮ್‌’ ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್‌, ಕಾರ್ಯದರ್ಶಿ ಕುಶಾಲ್‌ ಚಂದ್ರಶೇಖರ್‌, ನಟ ರವಿಕಿರಣ್‌ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದು, “ಧಮ್‌’ ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ವಿಆರ್‌ ಆರ್‌, “ನಾನು ಬಾಲನಟನಾಗಿ “ಹಾತಿ ಮೇರೆ ಸಾತಿ’ ಸೇರಿದಂತೆ ಸುಮಾರು 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿ ದ್ದೇನೆ. ನನ್ನ ತಾಯಿ ಮೈಸೂರಿನವರು. ಅವರಿಗೆ ನಾನು ಕನ್ನಡ ಸಿನಿಮಾವೊಂದನ್ನು ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಈ ಸಿನಿಮಾ ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿದೆ. ಈ ಸಿನಿಮಾದ ಹೀರೋ ಆಗಿ ಸಂಚಾರಿ ವಿಜಯ್‌ ಮಾಡಬೇಕಿತ್ತು. ಕಾರಣಾಂತರದಿಂದ ಅದು ಆಗಲಿಲ್ಲ. ನಂತರ ಶ್ರೀಜಿತ್‌ ಹೀರೋ ಆಗಿ ಆಯ್ಕೆಯಾದರು. ಶೀಘ್ರದಲ್ಲಿಯೇ ಸಿನಿಮಾ ರಿಲೀಸ್‌ ಆಗಲಿದೆ’ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next