Advertisement

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

02:58 PM Apr 23, 2024 | Team Udayavani |

ಮುಂಬೈ: ಪ್ರಯಾಣಿಕರ ದೇಹದ ಭಾಗದೊಳಗೆ ಹಾಗೂ ನ್ಯೂಡಲ್ಸ್‌ ಪ್ಯಾಕೇಟ್‌ ನಲ್ಲಿ ವಜ್ರ ಮತ್ತು ಚಿನ್ನದ ಕಳ್ಳಸಾಗಣೆ ಮಾಡುತ್ತಿದ್ದು, ಅಂದಾಜು 6.46 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಗಳನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

4.44 ಕೋಟಿ ರೂಪಾಯಿ ಮೌಲ್ಯದ 6.8 ಕೆಜಿಗೂ ಅಧಿಕ ಚಿನ್ನ ಹಾಗೂ 2.02 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು ವಶಪಡಿಸಿಕೊಂಡು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಸೋಮವಾರ (ಏ.22) ತಡರಾತ್ರಿ ಬಿಡುಗಡೆಗೊಳಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.

ಮುಂಬೈನಿಂದ ಬ್ಯಾಂಕಾಕ್‌ ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ತಪಾಸಣೆ ನಡೆಸಿದಾಗ, ಟ್ರಾಲಿಯಲ್ಲಿದ್ದ ಬ್ಯಾಗ್‌ ನೊಳಗೆ ನ್ಯೂಡಲ್ಸ್‌ ಪಾಕೇಟ್‌ ಗಳಲ್ಲಿ ವಜ್ರಗಳನ್ನು ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ.

ಘಟನೆಯ ನಂತರ ಆರೋಪಿಗಳನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬನ ಬಳಿ 359 ಗ್ರಾಂ ತೂಕದ ಚಿನ್ನದ ಬಿಸ್ಕತ್‌ ಗಳನ್ನು ಜಪ್ತಿ ಮಾಡಲಾಗಿದೆ .

Advertisement

ಇದಲ್ಲದೇ 10 ಮಂದಿ ಭಾರತೀಯ ಪ್ರಜೆಗಳಿದ್ದು, ಅವರಲ್ಲಿ ಇಬ್ಬರು ದುಬೈನ ಮತ್ತು ಅಬುಧಾಬಿಯಿಂದ, ಹಾಗೂ ಬಹ್ರೈನ್‌, ದೋಹಾ, ರಿಯಾದ್‌, ಮಸ್ಕತ್‌, ಬ್ಯಾಂಕಾಂಕ್‌, ಸಿಂಗಾಪುರ್‌ ನಿಂದ ಪ್ರಯಾಣಿಸುತ್ತಿದ್ದು, ಇವರನ್ನು ತಪಾಸಣೆಗೊಳಪಡಿಸಿದಾಗ 6.199 ಕೆಜಿ ಚಿನ್ನ ಪತ್ತೆಯಾಗಿತ್ತು. ಇದರ ಮೌಲ್ಯ 4.04 ಕೋಟಿ ರೂಪಾಯಿ ಎಂದು ಪ್ರಕಟನೆಯಲ್ಲಿ ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ಯಾವುದೇ ಮಾಹಿತಿ ಅಧಿಕಾರಿಗಳು ನೀಡಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next