Advertisement
ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅತಿ ಸಾರ ಭೇದಿ ನಿಯಂತ್ರಣ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಅತಿಸಾರ ಭೇದಿಯಿಂದ ಸಂಭವಿಸಿದ ದುರಂತಗಳ ಮಾಹಿತಿ ಪಡೆದರು.
Related Articles
ಗ್ರಾಮ, ನಗರ ಪಟ್ಟಣ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ನೀರಿನ ಟ್ಯಾಂಕರ್‌ಗಳ ಶುಚಿಗೊಳಿಸುವುದು. ವೈಜ್ಞಾನಿಕವಾಗಿ ಮಕ್ಕಳ ಕೈತೊಳೆಯುವ ರೀತಿಯನ್ನು ಹೇಳಿಕೊಡುವುದು.
Advertisement
ಸ್ವತ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಮತ್ತು ಮಕ್ಕಳ ಪೋಷಕರಲ್ಲಿ ಅತಿಸಾರ ಭೇದಿಯನ್ನು ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸುವುದು. ಈ ಅತಿಸಾರ ಭೇದಿಯ ನಿಯಂತ್ರಣ ಪ್ರಯೋಜನವನ್ನು ಪ್ರತಿ ತಾಲೂಕ ಮಟ್ಟದಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಿ ಅವರಿಂದ ಪ್ರತಿ ಹಂತದಲ್ಲಿ ಈ ಸಂಬಂಧ ಮಾಹಿತಿಗಳನ್ನು ಪಡೆದು ಕೊಂಡು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲಾಗುತ್ತದೆ ಎಂದು ಡಿಎಚ್‌ಒ ವಿವರಿಸಿದರು. ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡರು.
ಮುನ್ನೆಚ್ಚರಿಕೆ ಕ್ರಮಬೇಸಗೆ ಕಾಲ ಮತ್ತು ಮಳೆಗಾಲದಲ್ಲಿ ಚಿಕ್ಕಮಕ್ಕಳಲ್ಲಿ ನೀರು ಹಾಗೂ ಸ್ವತ್ಛತೆಯ ಕೊರತೆಯಿಂದ ತೀವ್ರವಾಗಿ ವಾಂತಿ ಭೇದಿ ಕಂಡುಬರುತ್ತದೆ. ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಸಾಂಕ್ರಾಮಿಕ ರೋಗಗಳನ್ನು ಸಂಪೂರ್ಣ ತಡೆಗಟ್ಟುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶ. ಒಆರ್.ಎಸ್. ದ್ರಾವಣ ಮತ್ತು ಜಿಂಕ್ ಮಾತ್ರೆಗಳನ್ನು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ನೀಡುವುದರಿಂದ ಈ ಕಾಯಿಲೆಯನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ರಾವ್ ಸಭೆಗೆ ಮಾಹಿತಿ ನೀಡಿದರು.