Advertisement

ದರ್ಶನ್ ಅಪಘಾತದ ಬಗ್ಗೆ ಜಗ್ಗೇಶ್ ಏನಂದ್ರು ಗೊತ್ತಾ?

01:12 PM Sep 24, 2018 | Team Udayavani |

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಪಘಾತವಾಗಿದೆ ಎಂಬ ಸುದ್ದಿ ಕೇಳಿ ನಾನು ದಿಗ್ಭ್ರಾಂತನಾದೆ ಎಂದು ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಹೌದು! ನವರಸನಾಯಕ ಜಗ್ಗೇಶ್ ತಮ್ಮ ಟ್ವೀಟರ್ ಖಾತೆಯಲ್ಲಿ, “ಕಲಾಬಂಧು ದರ್ಶನ್‍ಗೆ ಅಪಘಾತವಾದ ಸುದ್ದಿಕೇಳಿ ದಿಗ್ಭ್ರಾಂತನಾದೆ. ಕೋಟ್ಯಾಂತರ ಕನ್ನಡದ ಆತ್ಮಗಳು ಹಾಗೂ ಅಮ್ಮನ ಆಶೀರ್ವಾದ ದರ್ಶನ್ ಅವರನ್ನು ಕಾಪಾಡಿದೆ. ಕ್ಷೇಮವಾಗಿದ್ದಾರೆ ರಾಯರದಯೇ ಯಾರ ಕಣ್ಣು ತಾಕದೆ ಸುಖವಾಗಿ ಬಾಳಿ ಶುಭಹಾರೈಕೆ” ಎಂದು ಟ್ವೀಟ್ ಮಾಡಿದ್ದಾರೆ.

Advertisement

ಘಟನೆ ವಿವರ?: ಶನಿವಾರದಂದು ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ನಂತರ ಇಂದು ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್‍ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next