ಹೊಸದಿಲ್ಲಿ : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಬಿಗ್ ರಿಲೀಫ್ ದೊರಕಿದೆ.
ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂದು ತಾನು ಹೇಳಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಇಂದು ಸೋಮವಾರ ಸ್ಪಷ್ಟಪಡಿಸಿದೆ.
ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂದು ತಮಿಳು ನಾಡು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ಈ ಸ್ಪಷ್ಟನೆ ಕರ್ನಾಟಕಕ್ಕೆ ಶಾಂತಿ, ನೆಮ್ಮದಿಯನ್ನು ಕರುಣಿಸಿದಂತಾಗಿದೆ.
ಸುಪ್ರೀಂ ಕೋರ್ಟ್ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು , “ಉನ್ನತ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖೀಸಿರುವ ‘Scheme’ ಎಂದರೆ ನಿರ್ವಣಾ ಮಂಡಳಿಯ ರಚನೆ ಎಂದು ಅರ್ಥವಲ್ಲ’ ಎಂದು ಸ್ಪಷ್ಟಪಡಿಸಿದೆ.
ತಮಿಳು ನಾಡು ಸರಕಾರ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಎಪ್ರಿಲ್ 9ಕ್ಕೆ ಸುಪ್ರೀಂ ಕೋರ್ಟ್ ನಿಗದಿಸಿದೆ.