ಅಥಣಿ: ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಕನ್ನಡ ಪರ ಸಂಘಟನೆಗಳಿಂದ ದರೂರ ಗ್ರಾಮದ ಕೃಷ್ಣಾ ನದಿ ಸೇತುವೆ ಬದಿ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿರಿಸಿತು.
ರಾಜಕಾರಣಿಗಳ ಮಾತಿನಂತೆ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರನ್ನು ಹರಿಸುತ್ತಾರೆ ಎನ್ನುವ ನಿರೀಕ್ಷೆ ಹುಸಿಯಾಗಿದ್ದರಿಂದ ರೈತರು ರೋಸಿಹೊಗಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಶೀಘ್ರವೇ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಹರಿಸದಿದ್ದರೆ ರೈತರ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ. ಕೂಡಲೇ ಜಿಲ್ಲಾಡಳಿತ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಕೃಷ್ಣಾ ನದಿಗೆ ನೀರನ್ನು ಹರಿಸಲು ಮುಂದಾಗಬೇಕು ಎಂದರು.
ದಿನದಿಂದ ದಿನಕ್ಕೆ ಗಡಿ ಭಾಗದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಳದಿಂದ ಜನ ಕಂಗಾಲಾಗಿದ್ದಾರೆ. ಇಲ್ಲಿರುವ ಸಮಸ್ಯೆ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದಕರವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಶೀಘ್ರವೇ ಕೃಷ್ಣಾ ನದಿಗೆ ನೀರು ಹರಿಸದಿದ್ದರೆ ರೈತರು ಬೀದಿಗಿಳಿದು ತಾಲೂಕಿನಾದ್ಯಂತ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಸತೀಶ ಕುಲಕರ್ಣಿ, ಕುಮಾರ ಮಡಿವಾಳ ಇತರರು ಇದ್ದರು.
Advertisement
ರೈತರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತ ಪಡಿಸಿವೆ. ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮಹಾದೇವ ಮಡಿವಾಳ ಮಾತನಾಡಿ, ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿದ್ದರಿಂದ ರೈತರಿಗೆ ಜಾನುವಾರುಗಳಿಗೆ ನೀರಿಲ್ಲದೇ ಪರದಾಡುವಂತಾಗಿದ್ದು, ಸುತ್ತಮುತ್ತಲಿನ ಜನರಿಗೆ ಆತಂಕ ಎದುರಾಗಿದೆ. ಈ ಕುರಿತು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಕ್ರಮ ಕೈಗೊಳ್ಳದೇ ಕಣ್ಣು ಮುಚ್ಚಿ ಕುಳಿತಿವೆ ಎಂದು ಆರೋಪಿಸಿದರು.
Related Articles
Advertisement