Advertisement

ದರ್ಶನ್ ಗೆ ಉಪಚುನಾವಣೆ ಟಿಕೆಟ್ ನೀಡಲು ಮುಂದಾಗಿತ್ತಾ ಕಾಂಗ್ರೆಸ್.? ಸಿಪಿವೈ ಹೇಳಿದ್ದೇನು?

02:02 PM Jun 14, 2024 | Team Udayavani |

ರಾಮನಗರ: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧನವಾಗಿರುವ ನಟ ದರ್ಶನ್ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿದ್ದರಾ ಎಂಬ ಪ್ರಶ್ನೆ ಇದೀಗ ಎದ್ದಿದೆ. ಇದಕ್ಕೆ ಕಾರಣ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ ಸ್ಪೋಟಕ ಹೇಳಿಕೆ.

Advertisement

ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣದಿಂದ ಕಾಂಗ್ರೆಸ್ ಟಿಕೆಟ್ ನಲ್ಲಿ ದರ್ಶನ್ ಸ್ಪರ್ಧೆಗೆ ಡಿ.ಕೆ.ಬ್ರದರ್ಸ್ ಸಿದ್ಧತೆ ನಡೆಸಿದ್ದರು ಎಂಬರ್ಥದಲ್ಲಿ ಸಿಪಿವೈ ಹೇಳಿಕೆ ನೀಡಿದ್ದಾರೆ.

ಡಿ.ಕೆ.ಸುರೇಶ್ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದಿದ್ದರು. ಆ ಅಚ್ಚರಿ ಅಭ್ಯರ್ಥಿ ಇದೀಗ ಜೈಲು ಪಾಲಾಗಿದ್ದಾರೆ ಎಂದ ಯೋಗೇಶ್ವರ್ ಹೇಳಿದ್ದಾರೆ.

ಚಿತ್ರನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿ.ಕೆ.ಬ್ರದರ್ಸ್ ಪ್ಲ್ಯಾನ್ ಮಾಡಿದ್ದರು. ಆ ವ್ಯಕ್ತಿ ಯಾರು ಎಂದು ನೀವೇ ಊಹೆ ಮಾಡಿಕೊಳ್ಳಿ ಎಂದರು.

ದರ್ಶನ್ ಮೇಲೆ ಕೊಲೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸ್ತಿದೆ. ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ. ಆದರೆ ಈ ರೀತಿ ಅನಾಹುತ ಆಗಿ ಹೋಗಿದೆ, ನೋಡೋಣ ಎಂದು ಮಾಜಿ ಸಚಿವ ಸಿಪಿವೈ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next