ಹೊಸದಿಲ್ಲಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ವಿಚಾರಕ್ಕೆ ಸಂಬಂಧಿಸಿ ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ ನಾಥ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದ್ದು, ”ಹಾಗೇನಾದರೂ ಇದ್ದರೆ ನಿಮಗೆಲ್ಲ ತಿಳಿಸುತ್ತೇನೆ ಎಂದು ನಿನ್ನೆಯೇ ಹೇಳಿದ್ದೆ. ನಾನು ಯಾರೊಂದಿಗೂ ಮಾತನಾಡಲಿಲ್ಲ” ಎಂದು ಅಡ್ಡ ಗೋಡೆಯ ಮೇಲೆ ದೀಪ ಇಟ್ಟಿದ್ದಾರೆ.
ರಾಜಕೀಯ ವಲಯದಲ್ಲಿ ಭಾರೀ ನಡುವೆ ಕಮಲ್ ನಾಥ್ ಅವರ ಪುತ್ರ ನಕುಲ್ ಅವರು ಎಕ್ಸ್ ಖಾತೆಯ ಬಯೋ ದಿಂದ ಕಾಂಗ್ರೆಸ್ ಎಂಬ ಹೆಸರು ತೆಗೆದು ಹಾಕಿ ಕುತೂಹಲ ಮೂಡಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮಾತನಾಡಿ, ನಾನು ಕಮಲ್ ನಾಥ್ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ, ಕಾಂಗ್ರೆಸ್ ನಾಯಕತ್ವವು ಅವರೊಂದಿಗೆ ಚರ್ಚೆ ನಡೆಸುತ್ತಿದೆ. ನಾವೆಲ್ಲರೂ ಇಂದಿರಾ ಗಾಂಧಿಯವರ ಮೂರನೇ ಮಗ ಎಂದು ಭಾವಿಸಿದ ಅವರಂತಹವರು ಕಾಂಗ್ರೆಸ್‌ನಿಂದ ರಾಜಕೀಯ ಪ್ರಾರಂಭ ಮಾಡಿದವರು ಯಾವಾಗಲೂ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾರೆ ಮತ್ತು ಕಾಂಗ್ರೆಸ್ ಪಕ್ಷದ ಆಧಾರಸ್ತಂಭವಾಗಿದ್ದಾರೆ. ಅವರು ಕೇಂದ್ರದಲ್ಲಿ ಕ್ಯಾಬಿನೆಟ್ ಮಂತ್ರಿ, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿಯಾಗಿದ್ದರು. ಅವರು ಎಲ್ಲಾ ಹುದ್ದೆಗಳನ್ನು ಪಡೆದರು. ಅವರು ಪಕ್ಷ ತೊರೆಯುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಕಮಲ್ ನಾಥ್ ಅವರನ್ನು ತಮ್ಮ “ಮೂರನೇ ಮಗ” ಎಂದು ಬಣ್ಣಿಸಿದ್ದರು ಎಂದು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಹೇಳಿದ್ದರು. ಇಂದಿರಾ ಜಿ ಅವರ ಮೂರನೇ ಮಗ ಬಿಜೆಪಿಗೆ ಸೇರುವ ಕನಸು ಕಾಣುತ್ತೀರಾ?” ಎಂದು ಪ್ರಶ್ನಿಸಿದ್ದರು.