ಮದುರೈ: ಕೇಂದ್ರ ಸರ್ಕಾರ ಮತ್ತು ನ್ಯಾಯಾಂಗದ ನಡುವೆ ಅಭಿಪ್ರಾಯ ವ್ಯತ್ಯಾಸ ಇದೆ. ಹಾಗೆಂದ ಮಾತ್ರ ಭಿನ್ನಾಭಿಪ್ರಾಯ ಇದೆ ಎಂದು ತಿಳಿದುಕೊಳ್ಳಬೇಕಾಗಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿರುವುದಕ್ಕೆ ಕೇಂದ್ರ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.
ತಮಿಳುನಾಡಿನ ಮದುರೈನಲ್ಲಿ ಮುಖ್ಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಭಿನ್ನಮತ ಸಾಮಾನ್ಯ. ಅದನ್ನು ಸಂಘರ್ಷ ಎಂದು ಕರೆಯಬಾರದು ಎಂದರು.
ಸರ್ಕಾರದ ಯಾವುದೇ ಅಂಗಗಳ ನಡುವೆ ಸಮಸ್ಯೆಯಿಲ್ಲ. ಇಲ್ಲಿ ಸದೃಢ ಪ್ರಜಾಪ್ರಭುತ್ವದ ಮಾರ್ಗದಲ್ಲೇ ಚಟುವಟಿಕೆಗಳು ನಡೆಯುತ್ತಿವೆ. ಅದು ಬಿಕ್ಕಟ್ಟಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಈ ವೇಳೆ ಸರ್ವೋಚ್ಚ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಇದ್ದರು.