Advertisement

‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ದಿಗಂತ್

01:14 PM Jun 29, 2023 | Team Udayavani |

‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ..’ ಹೀಗೊಂದು ಸಿನಿಮಾ ತನ್ನ ಟೀಸರ್‌, ಸಾಂಗ್‌ ಮೂಲಕ ಸದ್ದು ಮಾಡಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

Advertisement

ಶೀಘ್ರದಲ್ಲೇ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಪ್ರೇಕ್ಷಕರ ಮುಂದೆ ಬರಲು ಚಿತ್ರತಂಡ ರೆಡಿಯಾಗಿದೆ. ಅಂದಹಾಗೆ, ಈ ಚಿತ್ರವನ್ನು ಪರಂವ ಪಿಕ್ಚರ್ಸ್‌ ವಿತರಣೆ ಮಾಡುತ್ತಿದೆ. ಗುಲ್‌ಮೊಹರ್‌ ಫಿಲಂಸ್‌ ಮತ್ತು ವರುಣ್‌ ಸ್ಟುಡಿಯೋಸ್‌ ಈ ಚಿತ್ರವನ್ನು ನಿರ್ಮಿಸಿದೆ. ಇನ್ನು, ಈ ಚಿತ್ರದಲ್ಲಿ ನಟ ದಿಗಂತ್‌ ಕೂಡಾ ನಟಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ. ಆದರೆ, ಚಿತ್ರತಂಡ ಮಾತ್ರ ಒಪ್ಪಿಕೊಂಡಿಲ್ಲ.

ಯೂತ್‌ ಸಬ್ಜೆಕ್ಟ್ ಒಳಗೊಂಡ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿತಿನ್‌ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾಗಣದಲ್ಲಿರುವ ಈ ಚಿತ್ರದಲ್ಲಿ ಸ್ಯಾಂಡಲ್‌ ವುಡ್‌ ಸ್ಟಾರ್‌ ನಟರ ಗೆಸ್ಟ್‌ ಅಪಿಯರೆನ್ಸ್‌ ಕೂಡಾ ಮಾಡಿದ್ದಾರೆ.

ಕರ್ನಾಟಕದಾದ್ಯಂತ ಸುಮಾರು 6000 ನಟ ನಟಿಯರನ್ನು ಆಡಿಷನ್‌ ಮಾಡಿ, 30 ಕಲಾವಿದರನ್ನು ಆಯ್ಕೆ ಮಾಡಿ ಸಿನಿಮಾ ಮಾಡಲಾಗಿದೆ. ಚಿತ್ರಕ್ಕೆ ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next