Advertisement

2024ಕ್ಕೆ 6 ಲಕ್ಷ ಹಳ್ಳಿಗಳಿಗೆ ಡಿಜಿಟಲ್‌ ಸಂಪರ್ಕ

11:09 PM Aug 17, 2021 | Team Udayavani |

ಶಿವಮೊಗ್ಗ: ದೇಶಾದ್ಯಂತ ನೆಟ್‌ವರ್ಕ್‌ ಸಮಸ್ಯೆ ಬಗೆಹರಿಸಲು ಕೇಂದ್ರ ಸರಕಾರ ಬದ್ಧವಾಗಿದ್ದು 2024ರ ವೇಳೆಗೆ  “ಭಾರತ್‌ ನೆಟ್‌’ ಯೋಜನೆಯಡಿ ದೇಶದ 6 ಲಕ್ಷ ಹಳ್ಳಿಗಳಿಗೆ ಡಿಜಿಟಲ್‌ ಸಂವಹನ ಸಂಪರ್ಕ ಕಲ್ಪಿಸಲಾಗುವುದು. ರಾಜ್ಯದ ಪ್ರತಿ ಜಿಲ್ಲೆಯ ಒಂದು ಹಳ್ಳಿಯಲ್ಲಿ ಪ್ರಾಯೋಗಿಕವಾಗಿ ಅನು ಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದರು.

Advertisement

ರಾಜ್ಯಾದ್ಯಂತ ಡಿಜಿಟಲ್‌ ಸಂವಹನ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಯ ಒಂದು ಹಳ್ಳಿಯನ್ನು ಪೈಲಟ್‌ ಪ್ರಾಜೆಕ್ಟ್ ಆಗಿ ಆಯ್ಕೆ ಮಾಡಿಕೊಂಡು ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಎಲ್ಲ ಹಳ್ಳಿಗಳಿಗೂ ವಿಸ್ತರಿಸಲಾಗುವುದು. ಈ ಮೂಲಕ ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್‌ ಸಮಸ್ಯೆ ಬಗೆಹರಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next