Advertisement

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

01:44 AM Sep 28, 2024 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಕೃಷಿ ಉತ್ಪನ್ನ ಮಾರುಕಟ್ಟೆ (ಎಂಪಿಎಂಸಿ)ಗಳನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ಹೇಳಿದರು.

Advertisement

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ 107ನೇ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿ, 5000 ಸದಸ್ಯ ಬಲ ಹೊಂದಿರುವ ಕೈಗಾರಿಕಾ ಸಂಸ್ಥೆ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡಿದೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಕೃಷಿ ಮಾರುಕಟ್ಟೆ ಕಾಯ್ದೆ ಮರುಸ್ಥಾಪಿಸಿ ಪುನರುಜ್ಜೀವನಗೊಳಿಸಿದೆ.

ರಾಜ್ಯದ ಎಲ್ಲ ಎಪಿಎಂಸಿಗಳನ್ನು ಡಿಜಿಟಲೀಕರಣಗೊಳಿಸುವ ಒತ್ತಾಯದ ಮೇರೆಗೆ ಎಲ್ಲ ಜಿಲ್ಲೆಗಳಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುವ ಮೂಲಕ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ರೈತರು, ವರ್ತಕರು ಸೇರಿದಂತೆ ಹಲವು ಪಾಲುದಾರರು ಈ ವ್ಯವಸ್ಥೆಯಲ್ಲಿದ್ದು ಯಾರಿಗೂ ಸಮಸ್ಯೆಯಾಗದಂತೆ ತ್ವರಿತವಾಗಿ ಪೂರ್ಣಗೊಳಿಸಿ ಅನುಕೂಲ ಕಲ್ಪಿಸಲಾಗುವುದು ಎಂದರು.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರ್ಥಿಕ ಚಟುವಟಿಕೆಗಳು ವೃದ್ಧಿಯಾದಾಗ ಮಾತ್ರ ಅಭಿವೃದ್ಧಿ ಸಾಧ್ಯ ಆ ನಿಟ್ಟಿನಲ್ಲಿ ಉದ್ದಿಮೆ, ಕೈಗಾರಿಕೆ ಪ್ರೋತ್ಸಾಹ ಜತೆಗೆ ಬಂಡವಾಳ ಹೂಡಿಕೆಗೆ ಸರಕಾರ ಉತ್ತೇಜನ ನೀಡಲಿದೆ ಎಂದರು. ಮೂಲಸೌಕರ್ಯಗಳ ಸಮಸ್ಯೆ ಪರಿಹಾರದ ಜತೆಗೆ ಭವಿಷ್ಯದ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ಯುವಜನತೆಗೆ ಬೇಕಾಗಿರುವ ಅಗತ್ಯ ಜ್ಞಾನ, ಕೌಶಲಗಳ ತರಬೇತಿ ನೀಡಿ ಮುಂದಿನ ಸವಾಲುಗಳಿಗೆ ಸಜ್ಜುಗೊಳಿಸುವ ಕಾರ್ಯದಲ್ಲಿ ಎಫ್ಕೆಸಿಸಿಐ ಮುಂದಾಗಬೇಕು ಎಂದರು.

ಎಫ್ಕೆಸಿಸಿಐ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ ಮಾತನಾಡಿ, ಎಫ್ಕೆಸಿಸಿಐನ ಕಾರ್ಯಕ್ರಮಗಳಿಗೆ ಸರಕಾರದಿಂದ ಉತ್ತಮ ಸ್ಪಂದನೆ ದೊರೆತಿದೆ. ಸದ್ಯ ಎಪಿಎಂಸಿ ಡಿಜಿಟಲೀಕರಣದಿಂದ ಕೈಗಾರಿಕಾ ಸಮುದಾಯಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next