Advertisement

Kannada Cinema; ‘ದಿಲ್ ಖುಷ್’ ನಿಂದ ಮೊದಲ ಹಾಡು ಬಂತು

02:41 PM Jan 04, 2024 | Team Udayavani |

ರೊಮ್ಯಾಂಟಿಕ್‌ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್‌ ಖುಷ್‌’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ನಿರ್ದೇಶಕ ಪ್ರಮೋದ್‌ ಜಯ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್‌ ಹಾಗೂ ಸ್ಪರ್ಶ ಹಾಡಿದ್ದಾರೆ. ಪ್ರಸಾದ್‌ ಕೆ. ಶೆಟ್ಟಿ ಸಂಗೀತ ಸಂಯೋಜಿಸಿದ್ದಾರೆ.

Advertisement

“ದಿಲ್‌ ಖುಷ್‌’ ಸಿನಿಮಾದ ಮೂಲಕ ರಂಜಿತ್‌ ಮೊದಲ ಬಾರಿಗೆ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸ್ಪಂದನಾ ಸೋಮಣ್ಣ ನಾಯಕಿಯಾಗಿದ್ದಾರೆ. ಉಳಿದಂತೆ ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್‌, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್‌, ಮಧುಸೂದನ್‌ ಮುಂತಾದವರು ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಜಯಪ್ರಭ ಕಲರ್‌ ಫ್ರೇಮ್ಸ್’ ಬ್ಯಾನರ್‌ನಲ್ಲಿ ಜಯಲಕ್ಷ್ಮಿ ಪ್ರವೀಣ್‌ ಹಾಗೂ ಪ್ರಭ ಶೇಖರ್‌ ನಿರ್ಮಿಸಿರುವ “ದಿಲ್‌ ಖುಷ್‌’ ಸಿನಿಮಾಕ್ಕೆ ಪ್ರಮೋದ್‌ ಜಯ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದು ನಿರ್ದೇಶನ ಮಾಡಿದ್ದಾರೆ.

ಸಿಂಪಲ್‌ ಸುನಿ ಸೇರಿದಂತೆ ಕೆಲ ನಿರ್ದೇಶಕರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ಪ್ರಮೋದ್‌ ಜಯ ಈ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇನ್ನು “ದಿಲ್‌ ಖುಷ್‌’ ಸಿನಿಮಾದಲ್ಲಿ ಐದು ಹಾಡುಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next