Advertisement

ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

11:46 AM Jun 06, 2021 | Team Udayavani |

ಮುಂಬೈ: ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್ ಅವರ ಅನಾರೋಗ್ಯ ಕಾಡಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ರವಿವಾರ ಮುಂಜಾನೆ ದಾಖಲು ಮಾಡಲಾಗಿದೆ.

Advertisement

98 ವರ್ಷದ ದಿಲೀಪ್ ಕುಮಾರ್ ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿ ನಿಯಮಿತ ಆರೋಗ್ಯ ತಪಾಸಣೆ ಬಳಿಕ ಬಿಡುಗಡೆಯಾಗಿದ್ದರು. ಇದೀಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪತ್ನಿ ಮತ್ತು ಪುತ್ರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಯಾವಾಗ ಕೇಳುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಿಎಂ

ಮುಂಬೈನ ಹಿಂದುಜಾ ಆಸ್ಪತ್ರೆಯಲ್ಲಿ ದಿಲೀಪ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಹಿರಿಯ ತಜ್ಞ ವೈದ್ಯರಾದ ಡಾ. ನಿತಿನ್ ಗೋಖಲೆ ಮತ್ತು ಡಾ. ಜಲೀಲ್ ಪಾರ್ಕರ್ ಅವರ ಆರೈಕೆಯಲ್ಲಿ ದಿಲೀಪ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಬೆಳಗ್ಗೆ 8.30 ಸುಮಾರಿಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ನಾವು ಆಸ್ಪತ್ರೆಗೆ ದಾಖಲಿಸಿದೆವು. ವೈದ್ಯರು ಅವರ ಚಿಕಿತ್ಸೆ ನೋಡಿಕೊಳ್ಳುತ್ತಿದ್ದಾರೆ. ಅಗತ್ಯ ತಪಾಸಣೆ ಮಾಡಲಾಗಿದೆ. ಅದರ ವರದಿಗಾಗಿ ಕಾಯುತ್ತಿದ್ದೇವೆ ಎಂದು ದಿಲೀಪ್ ಕುಮಾರ್ ಪತ್ನಿ ಸಾಯಿರಾ ಬಾನು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next