ಮುಂಬೈ: ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಸಹೋದರರಾದ ಇಷಾನ್ ಖಾನ್ (90) ಹಾಗೂ ಅಸ್ಲಾಂ ಖಾನ್ ಅವರಿಗೆ (88) ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಬ್ಬರಿಗೂ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ ಶನಿವಾರ ತಡ ರಾತ್ರಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಮ್ಲಜನಕ ಪ್ರಮಾಣ ಕಡಿಮೆ ಇದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇಬ್ಬರು ಸಹೋದರರಿಗೆ ಡಾ.ಜಲೀಲ್ ಪಾರ್ಕರ್ ಚಿಕಿತ್ಸೆ ನೀಡುತ್ತಿದ್ದು, ಈ ಕುರಿತು ಪಿಟಿಐ ಜತೆ ಮಾತನಾಡಿರು ಅವರು, ಇಬ್ಬರನ್ನೂ ಶನಿವಾರ ರಾತ್ರಿ ಆಸ್ಪತ್ರೆಗೆ ಕರೆತರಲಾಗಿತ್ತು. ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ಹೇಳಿದರು.
ಮಾರ್ಚ್‌ನಲ್ಲಿ ನಟ ದಿಲೀಪ್ ಕುಮಾರ್ (97) “ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಾನು ಐಸೊಲೇಷನ್ ಹಾಗೂ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದೇನೆ. ಎಲ್ಲರೂ ಸಾಧ್ಯವಾದಷ್ಟು ಮನೆಯಲ್ಲೇ ಉಳಿದುಕೊಂಡು ತಮ್ಮನ್ನು ರಕ್ಷಿಸಿಕೊಳ್ಳಬೇಕು’ ಎಂದು ಟ್ವೀಟ್‌ನಲ್ಲಿ ಮನವಿ ಮಾಡಿದ್ದರು.
Related Articles
ಕಳೆದ ಮಾರ್ಚ್ ನಲ್ಲಿ ನಟ ದಿಲೀಪ್ ಆರೋಗ್ಯದ ಬಗ್ಗೆ ಸಾಯಿರಾ ಬಾನು ಅವರು ಆಡಿಯೋ ವಿಶುವಲ್ ಸಂದೇಶದಲ್ಲಿ, ಹಲೋ…ದಿಲೀಪ್ ಸಾಬ್ ಅವರ ಆರೋಗ್ಯದ ವಿಷಯ ತಿಳಿಸಲು ತುಂಬಾ ಸಂತೋಷವಾಗುತ್ತಿದೆ. ಅವರ ಆರೋಗ್ಯ ತುಂಬಾ ಉತ್ತಮವಾಗಿದೆ. ವಿಪರೀತ ಬೆನ್ನು ನೋವು ಕಾಣಿಸಿಕೊಂಡಿತ್ತು. ನಂತರ ಲೀಲಾವತಿ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿ ವಾಪಸ್ ಬಂದಿದ್ದೇವೆ ಎಂದು ತಿಳಿಸಿದ್ದರು.