Advertisement

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

02:33 PM Jan 04, 2025 | Team Udayavani |

ವಿರಾಟ್‌ ನಾಯಕರಾಗಿರುವ “ರಾಯಲ್‌’ ಚಿತ್ರ ಜ.24ರಂದು ತೆರೆಕಾಣುತ್ತಿದೆ. ಈ ಚಿತ್ರದ ಟ್ರೇಲರ್‌ ಜನವರಿ ಎರಡನೇ ವಾರದಲ್ಲಿ ರಿಲೀಸ್‌ ಆಗಲಿದೆ.

Advertisement

ಈ ಚಿತ್ರದ ನಿರ್ದೇಶಕ ದಿನಕರ್‌ ತೂಗುದೀಪ, “ಚಿತ್ರದ ಹಾಡುಗಳು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿವೆ. ಚಿತ್ರ ಚೆನ್ನಾಗಿ ಮೂಡಿಬರುವುದಕ್ಕೆ ಕಾರಣ ಕಥೆಗಾರ ರಘು ನಿಡುವಳ್ಳಿ. ಸಂಭಾಷಣೆಯನ್ನೂ ಅವರೇ ಬರೆದಿದ್ದಾರೆ. ತಂತ್ರಜ್ಞರ ಸಹಕಾರದಿಂದ ಬಹಳ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ನಾನು ಕೇಳಿ ಎಲ್ಲವನ್ನೂ ಕೊಟ್ಟಿದ್ದಾರೆ. ಈ ಚಿತ್ರದಿಂದ ದುಡ್ಡು ಮಾಡಬೇಕು ಎನ್ನುವುದಕ್ಕಿಂತ, ಚಿತ್ರರಂಗಕ್ಕೊಬ್ಬ ಒಳ್ಳೆಯ ಹೀರೋ ಕೊಡಬೇಕು ಎಂದು ಸಹಕಾರ ಕೊಟ್ಟರು. ವಿರಾಟ್‌ ಎರಡನೇಯ ಸಿನಿಮಾಗೆ ಇಷ್ಟೊಂದು ಖರ್ಚು ಮಾಡಬೇಕಿತ್ತಾ ಎಂದೆನಿಸಬಹುದು. ಆದರೆ, ವಿರಾಟ್‌ನನ್ನು ಕೊಡುಗೆಯಾಗಿ ಕೊಡಬೇಕು ಎಂಬ ಉದ್ದೇಶದಿಂದ ಚಿತ್ರ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಗೋವಾ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಜನವರಿ ಎರಡನೇ ವಾರದಲ್ಲಿ ಟ್ರೇಲರ್‌ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

“ಚಿತ್ರ ನಿಜಕ್ಕೂ ರಾಯಲ್‌ ಆಗಿ ಬಂದಿದೆ. ಚಿತ್ರದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಚಿತ್ರದ ಮೂರು ಹಾಡುಗಳು ಯಶಸ್ವಿಯಾಗಿವೆ’ ಎನ್ನುವುದು ನಾಯಕ ವಿರಾಟ್‌ ಮಾತು.

ಚಿತ್ರದ ನಾಯಕಿಯಾಗಿ ಅಭಿನಯಿಸಿರುವ ಸಂಜನಾ ಮಾತನಾಡಿ, “ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಯಶಸ್ವಿಯಾಗಿವೆ. ದಿನಕರ್‌ ಅವರ ಚಿತ್ರಗಳನ್ನು ಎಲ್ಲರೂ ನೋಡಿದ್ದಾರೆ. ಇಷ್ಟಪಟ್ಟಿದ್ದಾರೆ. ಅವರ ಚಿತ್ರ ಜೀವನದಲ್ಲೇ ಇದು ವಿಭಿನ್ನವಾದ ಚಿತ್ರ. ಇನ್ನು, ಇದು ನನ್ನ ಅತ್ಯಂತ ವಿಶೇಷವಾದ ಚಿತ್ರ. ಬಹಳ ಚೆನ್ನಾಗಿ ಮೂಡಿಬಂದಿದೆ. ಚಿತ್ರದಲ್ಲಿ ಹಲವು ಕುತೂಹಲಗಳಿವೆ’ ಎಂದರು.

ರಘು ಮುಖರ್ಜಿ, ಛಾಯಾ ಸಿಂಗ್‌, ಅಚ್ಯುತ್‌ ಕುಮಾರ್‌, ರಂಗಾಯಣ ರಘು, ಪ್ರಮೋದ್‌ ಶೆಟ್ಟಿ, ರವಿ ಭಟ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next