Advertisement

ಇದ್ದು ಇಲ್ಲದಂತಾದ ದಿಂಡಗೂರು ಗ್ರಾಪಂ ಕಚೇರಿ!

03:16 PM Feb 25, 2023 | Team Udayavani |

ಚನ್ನರಾಯಪಟ್ಟಣ: ತಾಲೂಕಿನ ಕಸಬಾ ಹೊಬಳಿ ದಿಂಡಗೂರು ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸೆತ್ತು ಸಾರ್ವಜನಿಕರು ಹಾಗೂ ಸದಸ್ಯರು ಧರಣಿ ನಡೆಸಿದರು.

Advertisement

ಧರಣಿ ಉದ್ದೇಶಿಸಿ ಜೋಗಿಪುರ ನಂದನ್‌ ಮಾತನಾಡಿ, ಗ್ರಾಮ ಪಂಚಾಯಿತಿ ಬಾಗಿಲು ತೆರೆಯುವ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿಲ್ಲ, ಬೆಳಗ್ಗೆ 12 ಗಂಟೆಗೆ ಕಚೇರಿಗೆ ಆಗಮಿಸಿದ್ದೇನೆ. ಸಂಜೆ 4 ಗಂಟೆಯಾದರು ಇತ್ತು ಅಧಿಕಾರಿಗಳು ಸುಳಿದಿಲ್ಲ, ಇನ್ನು ಸಿಬ್ಬಂದಿಗಳು ಕಚೇರಿ ಯಲ್ಲಿ ಕುಳಿತ್ತಿಲ್ಲ ಎಂದು ಆಪಾದನೆ ಮಾಡಿದರು.

ದೂರು ನೀಡಿದರೂ ಕ್ರಮವಿಲ್ಲ: ಒಂದು ದಿವಸ ಈ ರೀತಿಯಾದರೆ ನಾವು ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ ವಾರದಲ್ಲಿ ಎರಡು ದಿವಸ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದೆ. ಎರಡೂ ದಿವಸವೂ ಇದೇ ರೀತಿಯಾಗಿದೆ. ಈ ಬಗ್ಗೆ ದೂರವಾಣಿ ಮೂಲಕ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನಿಲ್‌ಕುಮಾರ್‌ ಗಮನಕ್ಕೆ ತಂದರೂ ಅವರು ತಾಲೂಕು ಪಂಚಾಯಿತಿಗೆ ಆಗಮಿಸಿ ನಿಮ್ಮ ಕೆಲಸ ಮಾಡಿಕೊಡುತ್ತೇನೆ ಎನ್ನುತ್ತಾರೆ ಎಂದರು.

ಗ್ರಾಪಣ ಕಚೇರಿ ಬಂದ್‌ ಮಾಡಿ: ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಹಾಜರಾಗದೆ ಬಾಗಿಲು ತೆರೆದು ಈ ರೀತಿ ಹೋರ ಹೋಗುವುದಾದರೆ ಗ್ರಾಮ ಪಂಚಾಯಿತಿಗೆ ಕಾರ್ಯಾಲಯ ಅಗತ್ಯವಿಲ್ಲ, ಇದನ್ನು ಸಂಪೂರ್ಣ ಬಾಗಿಲು ಹಾಕಿ ತಾಲೂಕು ಪಂಚಾಯಿತಿಯಲ್ಲಿ ಎಲ್ಲಾ ಕೆಲಸ ಮಾಡಲಿ, ಮೇಲಾಧಿಕಾರಿಗಳ ನಿರ್ಲಕ್ಷದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸರಿಯಾಗಿ ಕಚೇರಿಗೆ ಆಗಮಿಸುತ್ತಿಲ್ಲ ಎಂದು ದೂರಿದರು.

ಗೈರಾದರೂ ಹಾಜರಾತಿ ಪುಸ್ತಕದಲ್ಲಿ ಸಹಿ: ಪಿಡಿಒ ರಾಮಸ್ವಾಮಿ ಕಚೇರಿಗೆ ಆಗಮಿಸಿಲ್ಲ. ಆದರೂ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆ ಇದನ್ನು ಗಮನಿಸಿದರೆ, ಪಿಡಿಒ ಎರಡ್ಮೂರು ದಿವಸದ ಸಹಿಯನ್ನು ಒಂದೇ ದಿವಸ ಮಾಡಿರುವುದ ಅನುಮಾನ ಕಾಡುತ್ತಿದೆ, ಇವರು ಜನರಿಗೆ ಸಿಗುತ್ತಿಲ್ಲ ದೂರವಣಿ ಕರೆ ಮಾಡಿದರೆ ಪುನ್‌ ಆ್ಯಪ್‌ ಮಾಡಿಕೊಂಡಿದ್ದಾರೆ, ಇಂದಹ ಅಧಿಕಾರಿ ವಿರುದ್ದ ಜಿಲ್ಲಾ ಪಂಚಾಯಿತಿ ಸಿಇಒ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

ಸಮಸ್ಯೆ ಆಲಿಸುವ ಸೌಜನ್ಯವಿಲ್ಲ: ಕಚೇರಿಯಲ್ಲಿ ನೀರುಘಟಿ, ಡಿಗ್ರೂಪ್‌ ನೌಕರರು ಕುಳಿತುಕೊಂಡು ಕಚೇರಿಗೆ ಆಗಮಿಸುವ ಜನರ ಸಮಸ್ಯೆ ಆಲಿಸುವ ಸೌಜನ್ಯ ಬೆಳೆಸಿಕೊಂಡಿಲ್ಲ, ಚನ್ನರಾಯಟಪಟ್ಟಣಕ್ಕೆ ಕೇಲವ ಎರಡು ಕೀಮಿ ಸಮೀಪದಲ್ಲಿ ದಿಂಡಗೂರು ಗ್ರಾಮ ಪಂಚಾಯಿತಿ ಇದೆ ಇಂತಹ ಗ್ರಾಪಂಗಳ ಗತಿ ಈ ರೀತಿಯಾದರೆ ಇನ್ನು ಗಡಿಯಲ್ಲಿ ಗ್ರಾಮ ಪಂಚಾಯಿತಿಗಳ ಸಮಸ್ಯೆ ಎಷ್ಟು ಇದೆ ಎನ್ನುವುದನ್ನು ಜಿಲ್ಲಾಧಿ ಕಾರಿಗಳು ಅರಿಯಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಹಣ ಪೋಲು: ಗ್ರಾಮ ಪಂಚಾಯಿತಿ ಸದಸ್ಯ ಮಂಜೇಗೌಡ ಮಾತನಾಡಿ, ಸ್ವತ್ಛ ಭಾರತ್‌ ವಿಷನ್‌ ಮೂಲಕ ಮೂರು ಲಕ್ಷ ರೂ.ವೆಚ್ಚ ಮಾಡಿ ಕಸ ಸಂಗ್ರಹ ಮಾಡಲು ಆಟೋ ಖರೀದಿಸಲಾಗಿದೆ. ಒಂದು ದಿವಸವೂ ರಸ್ತೆಯಲ್ಲಿ ಆಟೋ ಸಂಚಾರ ಮಾಡಿಲ್ಲ, ಸರ್ಕಾರದ ಹಣ ಪೋಲು ಮಾಡಲಾಗುತ್ತಿದೆ, ಅಧಿಕಾರಿಗಳ ನಿರ್ಲಕ್ಷಕ್ಕೆ ಜನರ ಹಣ ಮಣ್ಣು ಪಾಲು ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ತಾಪಂ ಇಒ ರಾಜೀನಾಮೆ ನೀಡಲಿ : ತಾಲೂಕು ಪಂಚಾಯಿತಿ ಇಒ ಸುನಿಲ್‌ ತಮ್ಮ ಕೈ ಕೆಳಗೆ ಕೆಲಸ ಮಾಡುವ ಸಿಬ್ಬಂದಿಗಳಿಂದ ಸರಿಯಾಗಿ ಕೆಲಸ ಮಾಡಿಸಲು ಸಾಧ್ಯವಾಗದೆ ಇದ್ದರೆ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಇಲ್ಲವೆ ಬೇರೆ ಕಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಬೇಕು, ಬದಲಾಗಿ ಸಾರ್ವಜನಿಕರಿಗೆ ಉಡಾಫೆ ಉತ್ತರ ನೀಡುವುದು ಎಷ್ಟು ಸರಿ? ಸರ್ಕಾರ ವೇತನ ನೀಡುವುದು ಜನರಿ ಸಮಸ್ಯೆ ಬಗೆ ಹರಿಸಲೆಂದು ಆದರೆ ಇವರು ಜನರನ್ನು ಮನೆ ಕೆಲಸದವರ ರೀತಿ ಮಾತನಾಡಿಸುತ್ತಾರೆ ಎಂದು ಜೋಗಿಪುರ ನಂದನ್‌ ಆಪಾದನೆ ಮಾಡಿದರು.

15ನೇ ಹಣಕಾಸಿನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಈ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಮಾಹಿತಿ ಕೇಳಿದ್ದೇನೆ. ಕಳೆದ ಒಂದು ತಿಂಗಳಿನಿಂದ ಮಾಹಿತಿ ನೀಡುತ್ತಿಲ್ಲ, ತಾಪಂ ಇಒ ಸುನಿಲ್‌  ಭೇಟಿ ಮಾಡಿದರೆ ಗ್ರಾಪಂ ಅಡಳಿತ ಮಂಡಳಿಯೇ ಸುಪ್ರೀಂ. ಇದಕ್ಕೂ ನನಗೂ ಸಂಬಂಧವಿಲ್ಲ ಅಂತಾರೆ. – ಚೇನತ್‌, ಆರ್‌ಟಿಐ ಕಾರ್ಯಕರ್ತ

Advertisement

Udayavani is now on Telegram. Click here to join our channel and stay updated with the latest news.

Next