Advertisement

ಇಂದು ದಿನೇಶ್‌ ಪ್ರಮಾಣ

06:00 AM Jul 11, 2018 | |

ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ.

Advertisement

ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಮೂಲಕ ಕಾಂಗ್ರೆಸ್‌ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಸುಮಾರು 60 ಸಾವಿರ ಜನರನ್ನು ಸೇರಿಸಿ ರಾಜ್ಯದ ಎಲ್ಲ ಕಾಂಗ್ರೆಸ್‌ ನಾಯಕರು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ. ದಿನೇಶ್‌ ಗುಂಡೂರಾವ್‌, ಈಶ್ವರ್‌ ಖಂಡ್ರೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸುವ ಕುರಿತು ರಾಹುಲ್‌ ಗಾಂಧಿ ಜೊತೆಗೆ ಸಮಾಲೋಚನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next