Advertisement

ಬೆಡ್ ಸ್ಕ್ಯಾಮ್ ಗೆ ಬಿಜೆಪಿ ನಾಯಕರೇ ಕಿಂಗ್ ಪಿನ್ ಗಳು: ದಿನೇಶ್ ಗುಂಡೂರಾವ್

03:04 PM May 08, 2021 | Team Udayavani |

ಬೆಂಗಳೂರು: ಬೆಡ್ ಬುಕಿಂಗ್ ಹಗರಣದಲ್ಲಿ ಬಿಜೆಪಿ ನಾಯಕರೇ ಕಿಂಗ್ ಪಿನ್ ಗಳು. ಬಳಿಕ ನಾಟಕ ಮಾಡುವವರು ಸಹ ಅವರೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೇಜಸ್ವಿ ಸೂರ್ಯ ಕಪಟ ನಾಟಕ ಸೂತ್ರದಾರ. ಅಲ್ಲಿ ಇರುವವರನನ್ನು ಖಾಲಿ ಮಾಡಿಸಬೇಕು. ತಮ್ಮ ಬೆಂಬಲಿಗರನ್ನು ಅಲ್ಲಿ ತಂದು ಕೂರಿಸಬೇಕೆಂದು ಈ ರೀತಿ ಮಾಡಿದ್ದಾರೆ. ಪುಡಿ ರೌಡಿಗಳ ರೀತಿ ಇವರು ಬೆಂಬಲಿಗರು ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದರು.

ತೇಜಸ್ವಿ ಸೂರ್ಯ ಮತ್ತೆ ಅಲ್ಲಿಗೆ ಹೋಗಿ ವಿಡಿಯೋ ಆಫ್ ಮಾಡಿ ಕ್ಷಮಾಪಣೆ ಕೇಳಿದ್ದಾರೆ. ಇವರು ಸಂಸದರಾಗುವುದಕ್ಕೆ ನಾಲಾಯಕ್,  ಇವರೆಲ್ಲರನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದರು.

ಬಿಜೆಪಿ ರೌಡಿ ಶಾಸಕರು ಮತ್ತು ಪುಡಿ ರೌಡಿಗಳ ಕಾರ್ಯಕರ್ತರಿಂದ ಈ ಘಟನೆ ಮಾಡಿದ್ದಾರೆ.. ಐಎಎಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಕ್ಕೆ ಹೋಗಿದ್ದಾರೆ. ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳಿಗೆ ರಕ್ಷಣೆ ಕೊಡಬೇಕು. ಕೂಡಲೇ ನ್ಯಾಯಾಂಗ ತನಿಖೆಗೆ ವಹಿಸಬೇಕು. ಬಿಜೆಪಿ ನಾಯಕರು ಮಾಡಿದ ಕೆಲಸ ಪ್ರತಿಯೊಬ್ಬ ರಾಜಕಾರಣಿಗೂ ಅವಮಾನ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next