Advertisement

ಮಾಂಸಾಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕಬೇಡಿ ಎಂದು ಹೇಳುವ ತಾಕತ್ತು ಬಿಜೆಪಿಗೆ ಇದೆಯೇ

09:51 AM Aug 23, 2022 | Team Udayavani |

ಬೆಂಗಳೂರು : ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಯವರು ಹೇಳಲಿ ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ ?

Advertisement

ಮಾಜಿ ಮುಖ್ಯಮಂತ್ರಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ್ದಾರೆ ಎಂಬ ವಿಚಾರ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು ಈ ಕುರಿತು  ಬಿಜೆಪಿ ವಿರುದ್ಧ ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.

ಬಳಿಕ ಮಾತನಾಡಿದ ಅವರು ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ? ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ., ನೋಟ ಪರರಿಚ್ಛೆ ಅಲ್ಲವೇ.?

ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ. ಯಾವುದೇ ಕೆಲಸಕ್ಕೂ ಭಕ್ತಿ ಶುದ್ಧವಾಗಿರಬೇಕು ಎಂದು ಹೇಳಿದ್ದಾರೆ.‌

ಇದನ್ನೂ ಓದಿ : ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಪ್ರತಿಭಟನೆ; ಬಿಜೆಪಿ ಶಾಸಕನ ವಿರುದ್ಧ ಎಫ್ ಐಆರ್

Advertisement

ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ‌‌ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ. ಅದು ಅವರ ಆಹಾರ ಪದ್ದತಿ. ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ. ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು. ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ. ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ. ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next