ಬೆಂಗಳೂರು: ಕೋವಿಡ್-19 ವಿರುದ್ಧ ಹೋರಾಡಿ ಹುತಾತ್ಮರಾದ 500ಕ್ಕೂ ಹೆಚ್ಚು ಕೋವಿಡ್ ವಾರಿಯರ್ಸ್‌ಗಳ ಪೈಕಿ ಕೇವಲ ಒಬ್ಬರಿಗೆ ಮಾತ್ರ ಪರಿಹಾರ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಚಾರ. ಕೋವಿಡ್-19 ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲವೆ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
“ಉದಯವಾಣಿ” ಪತ್ರಿಕೆಯಲ್ಲಿ ಇಂದು ಪ್ರಕಟವಾದ “ಹುತಾತ್ಮರು 500+ ಆದರೆ ಪರಿಹಾರ ಸಿಕ್ಕಿದ್ದು ಒಬ್ಬರ ಕುಟುಂಬಕ್ಕೆ ಮಾತ್ರ” ಎಂಬ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕೋವಿಡ್-19 ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲದೇ ಇರುವಾಗ ವಾರಿಯರ್ಸ್‌ಗಳು ಜೀವದ ಹಂಗು ತೊರೆದು ಸೋಂಕಿನ ವಿರುದ್ಧ ಹೋರಾಡಲು ಹೇಗೆ ಸಾಧ್ಯ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪ್ರಾಣಾಪಾಯದ ನಡುವೆಯೂ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೋವಿಡ್ ವಾರಿಯರ್ಸ್‌ಗಳ ಕರ್ತವ್ಯವನ್ನು ಸರ್ಕಾರ ಗೌರವಿಸಬೇಕು. ಸೋಂಕಿನ ವಿರುದ್ಧ ಹೋರಾಡಿ ಹುತಾತ್ಮರಾಗಿರುವ ಸೇನಾನಿಗಳ ಕುಟುಂಬ ಬೀದಿಗೆ ಬಂದಿದೆ. ಸರ್ಕಾರ ಕೂಡಲೆ ಹುತಾತ್ಮ ಸೇನಾನಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.