Advertisement
ಉಚಿತ ವಿದ್ಯುತ್‌ಗಾಗಿ ಎಸ್ ಸಿ/ಎಸ್ ಟಿ ಸಮುದಾಯದವರು ಈ ಸರ್ಕಾರಕ್ಕೇನು ಅರ್ಜಿಯೂ ಹಾಕಿರಲಿಲ್ಲ, ಭಿಕ್ಷೆಯೂ ಬೇಡಿರಲಿಲ್ಲ. ಸ್ವತಃ ಸರ್ಕಾರವೇ 75 ಯುನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ, ಈಗ ಸದ್ದೇ ಇಲ್ಲದೆ ವಾಪಾಸ್ ಪಡೆದಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ರಾಜಧರ್ಮ. ಈ ಬೊಮ್ಮಾಯಿ ಸರ್ಕಾರಕ್ಕೆ ತನ್ನ ಮಾತಿನ ಮೇಲೇ ನಿಲ್ಲುವ ಯೋಗ್ಯತೆಯಿಲ್ಲವೇ ಎಂದರು.
Related Articles
Advertisement
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಇಂದನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಈ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ರದ್ದು ಪಡಿಸಲಾಗಿದೆ ಎನ್ನುವ ಮಾಹಿತಿ ಎಲ್ಲ ಕಡೆಗಳಲ್ಲೂ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಎಂದರು.
ಯೋಜನೆಗೆ ಸಂಬಂಧಿಸಿ ವಿಧಿಸಿದ ಕೆಲವು ನಿಯಮಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಆಗಸ್ಟ್ 24ರಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾತ್ರ ಹಿಂಪಡೆಯಲಾಗಿದೆ. ನಿಯಮಾವಳಿಗಳನ್ನು ರದ್ದುಪಡಿಸಲಾಗಿದೆಯೇ ಹೊರತು ಯೋಜನೆಯನ್ನಲ್ಲ ಎಂದು ಸ್ಪಷ್ಟಪಡಿಸಿದರು