Advertisement

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

05:16 PM Jul 06, 2024 | Team Udayavani |

ಸುಳ್ಯ: ಆಸ್ಪತ್ರೆಯಲ್ಲಿ ವಿಶೇಷ ತಜ್ಞರ ನೇಮಕಕ್ಕೆ ಸರಕಾರ ಅನುಮತಿ ನೀಡಿದೆ. ಆದರೆ ದೂರ ಇರುವ ತಾಲೂಕುಗಳಿಗೆ ಬರಲು ಹಲವು ಮಂದಿ ಹಿಂದೇಟು ಹಾಕುತ್ತಿರುವುದರಿಂದ ಹಿನ್ನಡೆ ಆಗಿದೆ.

Advertisement

ಮುಂದಿನ ತಿಂಗಳು ಆಗಸ್ಟ್, ಸೆಪ್ಟೆಂಬರ್ ನಲ್ಲಿ ಪೋಸ್ಟ್ ಗ್ರಾಜುಯೇಷನ್ ಪೂರ್ಣಗೊಳ್ಳಲಿರುವವರಿಗೆ, ಅವರನ್ನು ಬಳಸಿಕೊಂಡು ಕಡ್ಡಾಯವಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಸುಳ್ಯದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದರು. ಈ ಹಿಂದಿನ ಸರಕಾರ ಕೂಡ ಆರೋಗ್ಯ ಇಲಾಖೆಯಲ್ಲಿ ಯಾವುದೇ ನೇಮಕಾತಿ ನಡೆಸಿಲ್ಲ. ನಾವು ಈಗಾಗಲೇ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಹುದ್ದೆ ಭರ್ತಿ ಆಗುವಲ್ಲಿ ವರೆಗೆ ಪರ್ಯಾಯ ವ್ಯವಸ್ಥೆಗೆ ಸೂಚಿಸಲಾಗುವುದು ಎಂದರು. ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಪ್ರತಿಕ್ರಿಯೆ ನೀಡಿದರು. ಮಾಜಿ ಎಂಎಲ್ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕೆ ಪಿ.ಸಿ.ಜಯರಾಮ್ ಜತೆಗಿದ್ದರು.

ಇದನ್ನೂ ಓದಿ: Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್

Advertisement

Udayavani is now on Telegram. Click here to join our channel and stay updated with the latest news.

Next