Advertisement

ಮೋದಿಗೆ ಜನಹಿತ ಮುಖ್ಯವೋ? ಅದಾನಿ ಗೆಳೆತನ ಮುಖ್ಯವೋ?: ದಿನೇಶ್ ಗುಂಡೂರಾವ್ ಪ್ರಶ್ನೆ

01:34 PM Feb 06, 2023 | Team Udayavani |

ಬೆಂಗಳೂರು: ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿಯವರು ಮೌನವಾಗಿರುವುದೇಕೆ? ಪ್ರಧಾನಿ ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅದಾನಿ ವಂಚನೆಯ ಬಗ್ಗೆ ಮಾತಾಡಲು‌ ಮೋದಿಯವರಿಗೆ ಸ್ನೇಹ ಅಡ್ಡಿಯಾಗುತ್ತಿದೆಯೇ? ಸ್ನೇಹಕ್ಕಾಗಿ ದೇಶದ ಲಕ್ಷಾಂತರ ಜನರ ಹೂಡಿಕೆ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆಯೇ ಮೋದಿ ಎಂದಿದ್ದಾರೆ.

ಭಾಗ್ ಮಿಲ್ಕಾ ಭಾಗ್ ಎಂಬಂತೆ‌ ಮೋದಿ ಆಡಳಿತದಲ್ಲಿ ಮೆಹುಲ್ ಚೋಕ್ಸಿ,ನೀರವ್ ಮೋದಿ, ಲಲಿತ್ ಮೋದಿ, ಮಲ್ಯ ಸೇರಿದಂತೆ ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಓಡಿ ಹೋಗಿದ್ದಾರೆ. ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ? ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದ್ದ ಎಲ್ ಐಸಿಯ 23 ಸಾವಿರ ಕೋಟಿ, ಎಸ್ ಬಿಐ ಕೊಟ್ಟ ಸಾವಿರಾರು ಕೋಟಿ ಸಾಲಕ್ಕೆ ಪಂಗನಾಮ ಗ್ಯಾರಂಟಿಯೇ? ಆರ್ಥಿಕ ಅಪರಾಧಗಳ ಬಗ್ಗೆ ತಮ್ಮದು ಝೀರೋ ಟಾಲರೆನ್ಸ್ ನಿಲುವು ಎಂದು ಮೋದಿಯವರು ಹೇಳುತ್ತಾರೆ. ಆದರೆ ಅದಾನಿ ಎಸಗಿದ ಆರ್ಥಿಕ ಅಪರಾಧದ ಬಗ್ಗೆ ಮೋದಿಯವರ ವ್ಯಾಖ್ಯಾನವೇನು? ಇ.ಡಿ, ಸಿಬಿಐ ಮತ್ತು ಐಟಿ ಸಂಸ್ಥೆಗಳು ಕೇವಲ ರಾಜಕೀಯ ವಿರೋಧಿಗಳ ವಿರುದ್ಧ ತನಿಖೆ ಮಾಡುವ ಸಂಸ್ಥೆಗಳೆ ಮೋದಿಯವರ ಅತ್ಯಾಪ್ತರಿಗೆ ಈ ತನಿಖಾ ಸಂಸ್ಥೆಗಳಿಂದ ವಿನಾಯಿತಿ ಇದೆಯೇ ಎಂದು ದಿನೇಶ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಗ್ರ್ಯಾಮಿ ಅವಾರ್ಡ್ ಗೆದ್ದ ಮೊದಲ ತೃತೀಯ ಲಿಂಗಿ: ಸಂತಸದಿಂದ ಭಾವುಕರಾದ ಗಾಯಕಿ

ಸಾರ್ವಜನಿಕರ ಜೀವನ ಭದ್ರತೆಗಾಗಿ ಕಾಂಗ್ರೆಸ್‌ 1956ರಲ್ಲಿ ಎಲ್ಐಸಿ ಸ್ಥಾಪಿಸಿತ್ತು. 2021ರ ವರೆಗೆ ಎಲ್ಐಸಿಯಲ್ಲಿದ್ದ ಜನರ ಹಣ ಸುಭದ್ರವಾಗಿತ್ತು. ಆದರೆ 2021ರಲ್ಲಿ ಈ ಸರ್ಕಾರ ಎಲ್ಐಸಿ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿತ್ತು. ಎಲ್ ಐಸಿ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದ್ದು ಯಾರ ಅನುಕೂಲಕ್ಕಾಗಿ ಮೋದಿಯವರೆ ಎಂದಿದ್ದಾರೆ.

Advertisement

ಮೋದಿಯವರ ಸ್ನೇಹಿತ ಗೌತಮ್ ಅದಾನಿ ಇನ್ನೇನು ಕೆಲವೇ ದಿನಗಳಲ್ಲಿ ‌ಮೋಸ್ಟ್ ವಾಂಟೆಡ್ ಫ್ಯುಜಿಟಿವ್ ಆಗಲಿದ್ದಾರೆ. ಅದಾನಿ ಸಮೂಹದಲ್ಲಿ‌ ಹೂಡಿಕೆ ಮಾಡಿದ್ದ ಎಲ್ಐಸಿಯ 23 ಸಾವಿರ ಕೋಟಿ, ಎಸ್ ಬಿಐನ ಸಾವಿರಾರು ಕೋಟಿಗೆ‌ ಉಂಡೆನಾಮ ಫಿಕ್ಸ್. ಮೋದಿಯವರೇ ನಿಮ್ಮ‌ ಗೆಳೆಯನಿಗಾಗಿ ದೇಶದ ಜನರ ದುಡ್ಡಿನ ಜೊತೆ ಚೆಲ್ಲಾಟವಾಡಬೇಡಿ. ಯಾಕೆಂದರೆ ಅದು ಜನರ ಬೆವರಿನ ದುಡ್ಡು ಎಂದು ದಿನೇಶ್ ಟ್ವೀಟ್ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next