Advertisement

ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮಿ ಗುಂಡೂರಾವ್ ನಿಧನ

08:33 AM Jan 06, 2021 | Team Udayavani |

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಪತ್ನಿ ಹಾಗೂ ಕಾಂಗ್ರೆಸ್​ ಮುಖಂಡ ದಿನೇಶ್ ಗುಂಡೂರಾವ್​ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ಮಂಗಳವಾರ ರಾತ್ರಿ (ಜ.5) ವಿಧಿವಶರಾಗಿದ್ದಾರೆ.

Advertisement

ವರಲಕ್ಷ್ಮಿ ಗುಂಡೂರಾವ್  ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.  ಗುಂಡೂರಾವ್ ನಿಧನದ ನಂತರ  1996ರಲ್ಲಿ ವರಲಕ್ಷ್ಮಿ ಗುಂಡೂರಾವ್ ಕೂಡ ರಾಜಕೀಯಕ್ಕೆ ಇಳಿದಿದ್ದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಅವರು ಸಂಸತ್ ಚುನಾವಣೆಗೆ  ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಅನಂತಕುಮಾರ್ ಎದುರು ಸೋಲು ಅನುಭವಿಸಿದ್ದರು.

ವರಲಕ್ಷ್ಮಿ ಗುಂಡೂರಾವ್ ಅವರು ಮೂವರು ಪುತ್ರರಾದ ದಿನೇಶ್ ಗುಂಡೂರಾವ್, ಮಹೇಶ್ ಗುಂಡೂರಾವ್ ಮತ್ತು ರಾಜೇಶ್ ಗುಂಡೂರಾವ್ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ (ಜ.6) ಅವರ ದೇವನಹಳ್ಳಿ ತೋಟದಲ್ಲಿ ನಡೆಯಲಿದೆ

ವರಲಕ್ಷ್ಮಿ ಅವರ ನಿಧನ ಸುದ್ದಿ ಕೇಳಿ ಆ‍ಘಾತವಾಯಿತು. ಗುಂಡೂರಾವ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

 

Advertisement

ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಅವರ ಪತ್ನಿ, ಕಾಂಗ್ರೆಸ್ ಮುಖಂಡ  ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next