ಮುಂಬೈ: ಕೋವಿಡ್ ಕಾರಣದಿಂದ ಅರ್ಧಕ್ಕೆ ಸ್ಥಗಿತವಾಗಿರುವ 14ನೇ ಆವೃತ್ತಿಯ ಐಪಿಎಲ್ ಕೂಟ ಯುಎಇ ನಲ್ಲಿ ನಡೆಯುವುದು ಖಚಿತವಾಗಿದೆ. ಈ ಬಗ್ಗೆ ಬಿಸಿಸಿಐ ಈಗಾಗಲೇ ಸ್ಪಷ್ಟಪಡಿಸಿದೆ. ಐಪಿಎಲ್ ತಂಡಗಳು ಕೂಡಾ ದ್ವಿತೀಯಾರ್ಧದ ಕೂಟಕ್ಕೆ ತಯಾರಿ ನಡೆಸುತ್ತಿದೆ. ಆದರೆ ಮೊದಲಾರ್ಧದಲ್ಲಿ ಭಾಗವಹಿಸಿದ್ದ ಕೆಲವು ವಿದೇಶಿ ಆಟಗಾರರು ಯುಎಇನಲ್ಲಿ ನಡೆಯುವ ಕೂಟದಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಬೌಲರ್ ಪ್ಯಾಟ್ ಕಮಿನ್ಸ್ ಅವರು ಈ ಬಾರಿಯ ಐಪಿಎಲ್ ನಲ್ಲಿ ಭಾಗವಹಿಸುವುದಿಲ್ಲ ಎಂದು ಕೆಕೆಆರ್ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹೇಳಿದ್ದಾರೆ.
ಇದನ್ನೂ ಓದಿ:ಮೇಕಪ್ ಕಲಾವಿದರಿಗೆ ನೆರವಿನ ಹಸ್ತ ಚಾಚಿದ ನಟಿ ಪ್ರಣೀತಾ
ಯುಎಇನಲ್ಲಿ ನಡೆಯುವ ಐಪಿಎಲ್ ನಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವತಃ ಪ್ಯಾಟ್ ಕಮಿನ್ಸ್ ಹೇಳಿದ್ದಾರೆ. ಆದರೆ ನಾಯಕ ಇಯಾನ್ ಮಾರ್ಗನ್ ವಿಚಾರಕ್ಕೆ ಬಂದರೆ ಇದುವರೆಗೆ ನಿರ್ಧಾರವಾಗಿಲ್ಲ. ಇನ್ನೂ ಮೂರು ತಿಂಗಳ ಸಮಯಾವಕಾಶವಿದೆ. ಅಲ್ಲಿಯವರೆಗೆ ಏನಾದರೂ ಆಗಬಹುದು. ಒಂದು ವೇಳೆ ಮಾರ್ಗನ್ ಭಾಗವಹಿಸದಿದ್ದಲ್ಲಿ ತಂಡದ ನಾಯಕತ್ವವನ್ನು ನಾನು ವಹಿಸಲು ಸಿದ್ದ ಎಂದು ದಿನೇಶ್ ಕಾರ್ತಿಕ್ ಹೇಳಿದರು.
ಇದುವರೆಗೆ ಏಳು ಪಂದ್ಯಗಳನ್ನು ಆಡಿರುವ ಕೆಕೆಆರ್ ಕೇವಲ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ.