Advertisement
ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಬಂದಿರುವ ಸೂಚನೆ ಬಗ್ಗೆ ಮೊದಲ ಬಾರಿ ನಗರದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಎಸ್ಸಿಪಿ-ಟಿಎಸ್ಪಿ ಹಣದಲ್ಲಿ ನಮ್ಮ ಪಾಲು ಕಡಿತವಾದ ಬಗ್ಗೆ ಹಾಗೂ ಕೆಲವು ಆಂತರಿಕ ಸಮಸ್ಯೆಗಳ ಬಗೆಹರಿಸುವ ಚರ್ಚೆಗಾಗಿ ಸಭೆ ಸೇರಲು ನಿರ್ಧರಿಸಿದ್ದೆವು. ಇದು ನಮ್ಮದೇ ಆಂತರಿಕ ವಿಚಾರವಾಗಿದ್ದರಿಂದ ದಿಲ್ಲಿ ನಾಯಕರಿಗೆ ಹೇಳಿರಲಿಲ್ಲ ಎಂದು ಹೇಳಿದರು.
ಶಾಸಕರ ಸಭೆ ಅಂದಾಗ ಅವರ ಗಮನಕ್ಕೆ ಹೋಗುತ್ತದೆ. ಹೀಗಾಗಿ ರಾಜ್ಯದ ಪಕ್ಷದ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕರೆ ಮಾಡಿ ಅವರೂ ಭಾಗವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು. ಹಾಗಾಗಿ ನಾನು ಆಹ್ವಾನ ಮಾಡಿದೆ. ಇದು ರಾಜಕೀಯ ಪ್ರೇರಿತ ಸಭೆಯಲ್ಲ, ನೀವೂ ಕೂಡ ಈ ಸಭೆಯಲ್ಲಿ ಭಾಗವಹಿಸಿ ಎಂದು ಆಹ್ವಾನ ಮಾಡಿದೆ. ಮುಂದೆ ಸಮಯ ಕೋಡುತ್ತೇನೆ ಎಂದು ನಮಗೆ ಹೇಳಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ, ಸಭೆ ನಡೆಸುತ್ತೇವೆ ಎಂದು ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದರು. ತಕ್ಕ ಉತ್ತರ ಕೊಡುವ ಶಕ್ತಿ ಇದೆ:
ಡಿನ್ನರ್ ಅಂದ್ರೆ ಏನೇನೋ ವ್ಯಾಖ್ಯಾನ ಮಾಡುತ್ತೀರಿ. ಸಭೆ ಇದ್ದಾಗ ಊಟ ಮಾಡುವುದು ಸಹಜ. ಊಟಕ್ಕೂ ಮೊದಲು ಚರ್ಚೆ ಮಾಡುತ್ತೇವೆ, ಸ್ವಲ್ಪ ದಿನ ಕಾಯೋಣ, ಸಭೆ ಅವರಿಗೆ ಇಷ್ಟ ಇತ್ತೋ ಅಥವಾ ಇಲ್ಲವೋ ಎಂಬುದು ಎಲ್ಲವೂ ಗೊತ್ತಾಗುತ್ತದೆ. ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ ಎಂದಿದ್ದಾರೆ. ದಲಿತ ಸಮುದಾಯದ ಮೇಲಿನ ದೌರ್ಜನ್ಯ ಬಗ್ಗೆ ಚರ್ಚೆ ಆಗಬೇಕಿದೆ. ಯಾರೂ ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಒಂದು ವೇಳೆ ಹೇಳಿದರೆ ಅದಕ್ಕೆ ತಲೆ ಕೆಡಿಸಿಕೊಳ್ಳೊಕೆ ಹೋಗಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ ಇದೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದರು. ಎಂದು ಪರಮೇಶ್ವರ್ ಹೇಳಿದರು.
Related Articles
Advertisement