Advertisement

ಡಿಪ್ಲೊಮಾ: ಎಲ್ಲ ವಿಷಯಗಳಿಗೂ ಕ್ಯಾರಿ ಓವರ್‌

11:04 PM Jun 13, 2022 | Team Udayavani |

ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರೆಕಾಲಿಕ ಪಾಲಿಟೆಕ್ನಿಕ್‌ಗಳಲ್ಲಿ ಅರೆಕಾಲಿಕ ಡಿಪ್ಲೊಮಾ ಕೋರ್ಸಿನ ಎಲ್ಲ ವಿಷಯಗಳಿಗೂ ಕ್ಯಾರಿ ಓವರ್‌ ಪದ್ಧತಿಯನ್ನು ವಿಸ್ತರಿಸಿದೆ.

Advertisement

ಕೊರೊನಾ ಹಿನ್ನೆಲೆಯಲ್ಲಿ 2021-22ನೇ ಸಾಲಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 4 ವಿಷಯಗಳಿಗೆ ಮಾತ್ರ ಇದ್ದ ಕ್ಯಾರಿ ಓವರ್‌ ಪದ್ಧತಿ ನೀಡಿತ್ತು. ಈಗ ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲಿ ಅನುತ್ತೀರ್ಣ ಆಗಿದ್ದರೂ ಮುಂದಿನ ತರಗತಿಗೆ ಪ್ರವೇಶ ಪಡೆದು ಅನುತ್ತೀರ್ಣರಾಗಿರುವ ವಿಷಯ ವನ್ನು ಮತ್ತೊಮ್ಮೆ ಪಾಸ್‌ ಮಾಡಿ ಕೊಳ್ಳಲು ಅವಕಾಶ ಕಲ್ಪಿಸಿದೆ.

ಇದು 5 ಮತ್ತು ಅದಕ್ಕಿಂತ ಹೆಚ್ಚಿನ ವಿಷಯಗಳನ್ನು ಬಾಕಿ ಉಳಿಸಿಕೊಂಡಿರುವ ಅರೆಕಾಲಿಕ ಪಾಲಿಟೆಕ್ನಿಕ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರೆಕಾಲಿಕ ವಿದ್ಯಾ ರ್ಥಿಗಳಿಗೆ ಮಾತ್ರ ಅನ್ವಯಿಸಲಿದೆ.

ಆ ಪ್ರಕಾರವಾಗಿ 3 ಮತ್ತು 5ನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯಲು ಹಾಗೂ 2022ರ ಆಗಸ್ಟ್‌/ ಸೆಪ್ಟಂಬರ್‌ ಸೆಮಿಸ್ಟರ್‌ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಲು ಅನು ಮತಿ ನೀಡಲಾಗಿದೆ ಎಂದು ತಾಂತ್ರಿಕ ಪರೀಕ್ಷಾ ಮಂಡಳಿ ಪ್ರಕಟನೆ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next