ಬೆಂಗಳೂರು: ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್‌ಗೆ ಸೇರುವ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕದ ವಿವರವನ್ನು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
2019-20ನೇ ಸಾಲಿನಲ್ಲಿ ರಾಜ್ಯದ 25 ನೋಡಲ್ ಸೆಂಟರ್‌ಗಳಲ್ಲಿ ಆನ್‌ಲೈನ್ ಇಂಟರಾಕ್ಟಿವ್ ಕೌನ್ಸೆಲಿಂಗ್ ಮೂಲಕ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯಕ್ಕೆ ಸಂಬಂಧಿಸಿದಂತೆ ಬೋಧನಾ ಶುಲ್ಕ ಹಾಗೂ ಇತರೆ ಶುಲ್ಕಕ್ಕೆ ವಿನಾಯ್ತಿ ಕಲ್ಪಿಸಿ, ಪಾವತಿಸಬೇಕಾದ ಶುಲ್ಕದ ವಿವರವನ್ನು ಇಲಾಖೆ ಹೊರಡಿಸಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 4270ರೂ., ಅನುದಾನಿತ ಪಾಲಿಟೆಕ್ನಿಕ್ ಕಾಲೇಜಿಗೆ 6948 ರೂ. ಹಾಗೂ ಖಾಸಗಿ ಪಾಲಿಟೆಕ್ನಿಕ್‌ಗಳಲ್ಲಿ 13405 ರೂ. ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಲ್ಲಿ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದ ವರೆಗೆ ಇದ್ದರೆ ಸರ್ಕಾರಿ ಹಾಗೂ
ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ 430 ರೂ. ಹಾಗೂ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದಿಂದ 10 ಲಕ್ಷದ ವರೆಗೆ ಇರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 2535 ರೂ.ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ 3874 ರೂ. ನಿಗದಿ ಮಾಡಲಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗ ವಿದ್ಯಾರ್ಥಿಗಳಲ್ಲಿ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದವರೆಗೆ ಇದ್ದರೆ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 960 ರೂ. ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ 3638 ರೂ.ಗಳನ್ನು ನಿಗದಿ ಮಾಡಲಾಗಿದೆ.
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಲ್ಲಿ ಕುಟುಂಬದ ವಾರ್ಷಿಕ ಆದಾಯ 1 ಲಕ್ಷದ ವರೆಗೆ ಇದ್ದರೆ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 4270 ರೂ. ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ 6948 ರೂ. ಮತ್ತು ಖಾಸಗಿ ಪಾಲಿಟೆಕ್ನಿಕ್‌ಗಳಲ್ಲಿ 13405 ರೂ. ನಿಗದಿ ಮಾಡಲಾಗಿದೆ. ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್
//dte.kar.nic.in ನೋಡಬಹುದಾಗಿದೆ.