Advertisement

ಜುಲೈ 15ರಿಂದ ನಡೆಯಬೇಕಿದ್ದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆ

08:06 PM Jul 06, 2020 | sudhir |

ಬೆಂಗಳೂರು : ಜುಲೈ 15 ರಿಂದ ನಡೆಯಬೇಕಿದ್ದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಜುಲೈ 15ರಿಂದ ಆಗಸ್ಟ್ 5 ರವರೆಗೆ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದಿದ್ದು ಜೊತೆಗೆ ಶಾಲಾ , ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳನ್ನು ಜುಲೈ 31ರ ವರೆಗೆ ತೆರೆಯದಿರಲು ಸೂಚನೆ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳ ದಿನಾಂಕವನ್ನು ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next