Advertisement

ನೇರ ಫೋನ್‌ ಇನ್‌ ಕಾರ್ಯಕ್ರಮ

07:14 AM May 28, 2020 | mahesh |

ಬೆಳಗಾವಿ: ನೀರು ಉಳಿಸುವ ಬಗ್ಗೆ ಜಾಗೃತರಾಗದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಮೊದಲು ನಮ್ಮ ಮನೆಗಳಲ್ಲಿ ನೀರನ್ನು ಮಿತವ್ಯಯವಾಗಿ ಬಳಸಬೇಕು ಮತ್ತು ನೀರಿನ ಮಹತ್ವ ಅರಿಯಬೇಕಾಗಿದೆ ಎಂದು ಹುಕ್ಕೇರಿ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಅಭಯಂತರರಾದ ಎ.ಬಿ. ಪಟ್ಟಣಶೆಟ್ಟಿ ಹೇಳಿದರು.

Advertisement

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಶೌಚಾಲಯದ ನಿರ್ಮಾಣ, ನಿರ್ವಹಣೆ ಹಾಗೂ ಉಪಯೋಗ, ಸಾರ್ವಜನಿಕ ಶೌಚಾಲಯದ ಸಮಸ್ಯೆಗೆ ಸಂಬಂಧಿಸಿದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಳುಗರ ಕರೆಗಳಿಗೆ ಉತ್ತರಿಸಿದ ಅವರು, ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ವಿತರಿಸಲು ಕ್ರಮಕೈಗೊಳ್ಳಲಾಗುವುದು. ಜನರು ನೀರನ್ನು  ಮಿತವಾಗಿ ಬಳಸದೆ ಪೋಲು ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ನೀರಿಲ್ಲದೆ ಬಹಳ ಕಷ್ಟ ಪಡಬೇಕಾಗುತ್ತದೆ ಎಂದರು.

ಆರೋಗ್ಯ ಸುಧಾರಣೆಗಾಗಿ, ಜನರ ರಕ್ಷಣೆಗಾಗಿ ಎಲ್ಲಕ್ಕಿಂತ ಹೆಚ್ಚಾಗಿ ಮಹಿಳೆಯರ ಮತ್ತು ಬಾಲಕಿಯರ ಗೌರವ ಕಾಪಾಡಲೂ ಶೌಚಾಲಯ ಸುಭದ್ರತೆಯ ಸಂಕೇತವಾಗಿದೆ. ಶೌಚಾಲಯದ ನಿರ್ಮಾಣ ಎಂದು ಹೇಳಿದ ಸಹಾಯಕ ಅಭಿಯಂತರಾದ ರವೀಂದ್ರ ಮುರಗಾಲಿ, ಶೌಚಾಲಯ ನಿರ್ವಹಣೆ ಹಾಗೂ ಉಪಯೋಗ ಮತ್ತು ಸಾರ್ವಜನಿಕ ಶೌಚಾಲಯದ ಸಮಸ್ಯೆಗೆ ಸಂಬಂಧಿಸಿದ ಕರೆಗಳಿಗೆ ಉತ್ತರಿಸಿದರು. ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಾಚಾರ್ಯ ಕಿರಣ ಚೌಗಲಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next