Advertisement

ನೇರ ನೇಮಕಾತಿ

02:28 AM Sep 05, 2019 | Sriram |

ಉಡುಪಿ/ಮಂಗಳೂರು: ಪೇಟಿಯಂ ಹಾಗೂ ಸೋನಿಕಂಪೆನಿ ವತಿಯಿಂದ ಫೀಲ್ಡ್ ಸರ್ವಿಸ್‌ ಎಂಜಿನಿಯರ್‌ ಹುದ್ದೆಗೆ ನೇರ ನೇಮಕಾತಿಯು ಸೆ. 6ರ ಬೆಳಗ್ಗೆ 10.30ರಿಂದ ಅಪರಾಹ್ನ 3 ಗಂಟೆಯ ವರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ಮತ್ತು ಸೆ. 7ರಂದು ಬೆಳಗ್ಗೆ 10ರಿಂದ ಅಪರಾಹ್ನ 3ರ ವರೆಗೆ ಮಂಗಳೂರು ಮಹಾನಗರಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆಯೊಂದಿಗೆ ಚಾಲನಾ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಂಬಿಎ ಇಂಟರ್ನ್ಶಿಪ್‌ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ ವಿವರ ಹಾಗೂ ಆಧಾರ್‌ ಕಾರ್ಡ್‌ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

Advertisement

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ: 0820-2574869 / 0824-2457139 ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next