Advertisement

ಶಾಸಕರ ನೇರ ಆಯ್ಕೆ: ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

12:33 AM Apr 28, 2022 | Team Udayavani |

ಬೆಂಗಳೂರು: ಮುಂಬರುವ ವಿಧಾನಸಭೆಗೆ ಚುನಾವಣೆ ನಡೆಸದೆ ಎಲ್ಲ ರಾಜಕೀಯ ಪಕ್ಷಗಳಿಂದ ಪ್ರತಿನಿಧಿಸುವ ಜನಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಬೆಂಗಳೂರಿನ ಮುರಳಿ ಕೃಷ್ಣ ಬ್ರಹ್ಮಾನಂದಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿತು.

ಅರ್ಜಿದಾರರು 2023ರಲ್ಲಿ ರಾಜ್ಯ ವಿಧಾಸನಸಭೆಗೆ ಚುನಾವಣೆ ನಡೆಸದೆ ಎಲ್ಲ ರಾಜಕೀಯ ಪಕ್ಷಗಳಿಂದ ಪ್ರತಿನಿಧಿಸುವ ಜನಪ್ರತಿನಿಧಿಗಳನ್ನು ಶಾಸಕರಾಗಿ ನೇರ ಆಯ್ಕೆ ಮಾಡಬೇಕು ಎಂದು ಕೋರಿದ್ದರು.

ಅಲ್ಲದೇ ಜನಪ್ರತಿನಿಧಿಗಳ ಕಾಯ್ದೆ- 1951ರ ಅಡಿಯಲ್ಲಿ ವಿಧಾನ ಸಭೆ ಚುನಾವಣೆ ನಡೆಸುವ ವಿಚಾರವಾಗಿ ಅರ್ಜಿದಾರರು ತಮ್ಮ ಅರ್ಜಿ ಯಲ್ಲಿ ಕುಂದು ಕೊರತೆಗಳನ್ನು ವ್ಯಕ್ತಪಡಿ ಸಿದ್ದರು. ಆದರೆ, ಕಾಯ್ದೆಯ ನಿಯಮಗಳನ್ನು ಪ್ರಶ್ನಿಸಿಲ್ಲ. ಅರ್ಜಿದಾರರು ಎತ್ತಿರುವ ವಿಚಾರಗಳ ಕುರಿತು ನ್ಯಾಯಾ ಲಯ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ.

ಇದೊಂದು ತಪ್ಪು ಗ್ರಹಿಕೆಯಿಂದ ಸಲ್ಲಿಸಿರುವ ಅರ್ಜಿಯಾಗಿದ್ದು, ಅದನ್ನು ವಜಾ ಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.

Advertisement

ಐಸಿಸ್‌ ಉಗ್ರ ಸಂಘಟನೆ ಸಂಪರ್ಕ ಜಾಮೀನು ನಿರಾಕರಣೆ
ಬೆಂಗಳೂರು: ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಪ್ರಕರಣದ ಆರೋಪಿ ಮೊಹಮ್ಮದ್‌ ಜೈದ್‌ಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಇದೇ ವೇಳೆ ಮತ್ತೂಬ್ಬ ಅರೋಪಿ ಸಲೀಂ ಖಾನ್‌ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿ ತಿರಸ್ಕರಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿಗಳಾದ ಸಲೀಂ ಖಾನ್‌ ಹಾಗೂ ಮೊಹಮ್ಮದ್‌ ಜೈದ್‌ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ| ಎಸ್‌. ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿ ಒಬ್ಬ ಆರೋಪಿಗೆ ಜಾಮೀನು ನಿರಾಕರಿಸಿ, ಮತ್ತೂಬ್ಬ ಆರೋಪಿಗೆ ಆರೋಪಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಅಲ್‌ ಹಿಂದ್‌ ಸಂಘಟನೆ ಸದಸ್ಯನಾಗಿದ್ದ ಮೊಹಮ್ಮದ್‌ ಜೈದ್‌ ಭಾರತದಲ್ಲಿ ಐಸಿಸ್‌ ಚಟುವಟಿಕೆಗಳನ್ನು ವಿಸ್ತರಿಸಲು ಪ್ರಮುಖ ಆರೋಪಿ ಮಹಬೂಬ್‌ ಪಾಷಾಗೆ ಸಹಕಾರ ನೀಡಿದ್ದ, ಹಲವು ಗುಪ್ತ ಸಭೆಗಳಲ್ಲಿ ಭಾಗಿಯಾಗಿದ್ದ ಎಂಬ ಚಾರ್ಜ್‌ಶೀಟ್‌ನ ಅಂಶಗಳನ್ನು ಆಧರಿಸಿ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ. ಎನ್‌ಐಎ ಪರ ಪಿ. ಪ್ರಸನ್ನಕುಮಾರ್‌ ಹಾಗೂ ಅರ್ಜಿದಾರರ ಪರ ಎಸ್‌. ಬಾಲಕೃಷ್ಣನ್‌ ವಾದ ಮಂಡಿಸಿದ್ದರು.

 

 

Advertisement

Udayavani is now on Telegram. Click here to join our channel and stay updated with the latest news.

Next