Advertisement
ಇಲ್ಲಿನ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ತಿಂಗಳ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ, ಅಂಗನವಾಡಿ ಹೊಸ ಕಟ್ಟಡಗಳ ನಿರ್ಮಾಣ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ರೇಷ್ಮೆ ಹುಳು ಸಾಕಾಣಿಕೆ ಕಟ್ಟಡಗಳು ಖಾಲಿ ಇದ್ದಲ್ಲಿ ಅವುಗಳ ಕುರಿತು ಇಲಾಖೆ ಪಟ್ಟಿ ಮಾಡಿ, ಜಿ.ಪಂ. ಸಿಇಒ ಅವರಿಗೆ ವರದಿ ಸಲ್ಲಿಸಬೇಕು. ಈ ಖಾಲಿ ಕಟ್ಟಡಗಳನ್ನು ಅಗತ್ಯವಿರುವ ಇಲಾಖೆಗಳಿಗೆ ನೀಡಲು ಕ್ರಮ ಕೈಕೊಳ್ಳಲು ಜಿ.ಪಂ. ಅಧ್ಯಕ್ಷರು ಸೂಚಿಸಿದರು.
Related Articles
Advertisement
ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ ನಿಧಿಯಡಿ ವಾರ್ಷಿಕ 6 ಸಾವಿರ ರೂ. ಪಡೆಯಲು ಈ ಹಿಂದಿನ ನಿರ್ದೇಶನದಂತೆ 95 ಸಾವಿರ ಅರ್ಹ ರೈತರ ಪೈಕಿ 39,500 ರೈತರು ನೋಂದಣಿ ಮಾಡಿಸಿದ್ದು, ಅದರಲ್ಲಿ 9 ಸಾವಿರ ರೈತರು ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಪುನರವಿಮರ್ಷಿತ ಸೂಚನೆಯಂತೆ ಜಿಲ್ಲೆಯ ಎಲ್ಲ 1.67 ಲಕ್ಷ ರೈತರು (ಜನಪ್ರತಿನಿಧಿ, ಆದಾಯ ಕರ ಸಂದಾಯಿತರನ್ನು ಹೊರತುಪಡಿಸಿ) ಈ ಯೋಜನೆ ವ್ಯಾಪ್ತಿಗೆ ಬರುತ್ತಿದ್ದು, ನಿಗದಿತ ಕೇಂದ್ರ ಸರ್ಕಾರ ಪೋರ್ಟಲ್ನಲ್ಲಿ ರೈತರು ನೋಂದಣಿ ಮಾಡಿಸಬೇಕು. ಜಿಲ್ಲೆಯ ಶಿರಹಟ್ಟಿ ಭಾಗದಲ್ಲಿ ಕೆಲವೆಡೆ ಉತ್ತಮ ಮಳೆಯಾಗಿದ್ದು ಹೆಸರಿನ ಬಿತ್ತನ ಆರಂಭಗೊಂಡಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಅಗತ್ಯದ ಕ್ರಮ ಕೈಕೊಂಡಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಾಲರೆಡ್ಡಿ ಸಭೆಗೆ ಮಾಹಿತಿ ನೀಡಿದರು.
ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಈರಪ್ಪ ನಾಡಗೌಡ್ರ ವಿವಿಧ ವಿಷಯಗಳ ಚರ್ಚೆಯಲ್ಲಿ ಭಾಗವಹಿಸಿದ್ದರು. ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶರಾವ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.