Advertisement

28ರೊಳಗೆ ಅಧಿಸೂಚನೆ ಹೊರಡಿಸಲು ನಿರ್ದೇಶನ

06:35 AM Aug 14, 2018 | Team Udayavani |

ಬೆಂಗಳೂರು: ಅವಧಿ ಪೂರ್ಣಗೊಳ್ಳಲಿರುವ ಮಹಾನಗರ ಪಾಲಿಕೆಗಳ ಮೇಯರ್‌,ಉಪಮೇಯರ್‌, ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಹಂಚಿಕೆ ಕುರಿತು ಆ.28ರೊಳಗೆ ಅಧಿಸೂಚನೆ ಹೊರಡಿಸುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

Advertisement

ಈ ಕುರಿತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸೋಮವಾರ
ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ
ವಿಭಾಗೀಯ ಪೀಠ, ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ರಾಜ್ಯಸರ್ಕಾರದ ಪರ ವಕೀಲರು,ಅವಧಿ ಪೂರ್ಣಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲು ಪಟ್ಟಿ ಅಧಿಸೂಚನೆಯನ್ನು ಹೊರಡಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಆಗಸ್ಟ್‌ 28ಕ್ಕೆ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next